ಭದ್ರಾ ಜಲಾಶಯದಿಂದ 39017 ಕ್ಯೂಸೆಕ್ ನೀರು ಹೊರಕ್ಕೆ: ಹೊಸಸೇತುವೆ ಸಂಚಾರ ಬಂದ್

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಭದ್ರಾ ಜಲಾಶಯದಿಂದ 39017 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಸೇತುವೆ ಮುಳುಗುವ ಹಂತಕ್ಕೆ ತಲುಪಿದ್ದು ಮುಂಜಾಗ್ರತಾ ಕ್ರಮ ವಾಗಿ ಸೇತುವೆ ಮೇಲೆ ಸಂಚಾರ ಬಂದ್ ಮಾಡಲಾಗಿದೆ.

ಭಾನುವಾರ ಬೆಳಗ್ಗೆ ಹೊಸ ಸೇತುವೆ ಮೇಲ್ಬಾಗದ ಹಂತಕ್ಕೆ ನದಿ ನೀರು ಹರಿಯುತ್ತಿದ್ದು, ಈ ಕಾರಣದಿಂದ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಬದಲಿ ಮಾರ್ಗದ ಮೂಲಕ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಜತೆಗೆ ಪ್ರವಾಹ ಭೀತಿ ಸೃಷ್ಟಿಸಿದೆ.

ಅಣೆಕಟ್ಟೆಗೆ ಅಪಾರ ಪ್ರಮಾಣದ ಒಳಹರಿವು ಇರುವುದರಿಂದ ಕ್ರಸ್ಟ್ ಗೇಟ್ ಮೂಲಕ 34306 ಕ್ಯೂಸೆಕ್ಸ್ ಬಿಡುಗಡೆ ಮಾಡಲಾಗು ತ್ತಿದೆ. ಭದ್ರಾ ಡ್ಯಾಂಗೆ 39017 ಕ್ಯೂಸೆಕ್ಸ್ ಒಳಹರಿವಿದ್ದು, ಅಷ್ಟೇ ಪ್ರಮಾಣದಲ್ಲಿ ಜಲಾಶಯದಿಂದ ನೀರು ಹೊರಗಡೆ ಬಿಡಲಾಗುತ್ತಿದೆ. ಜಲಾಶಯದ ಇಂದಿನ ನೀರಿನ ಮಟ್ಟ 180.6 ಅಡಿ ಆಗಿದ್ದು, ಜಲಾಶಯ ಭರ್ತಿಗೆ ಕೇವಲ 5.4 ಅಡಿ ಮಾತ್ರ ಬೇಕು. ಜಲಾಶಯಕ್ಕೆ ಸುಮಾರು 39 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಬರುತ್ತಿರುವು ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಅಷ್ಟೇ ನೀರು ಹೊರಗಡೆ ಬಿಡಲಾಗುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು