ಭದ್ರಾವತಿ-ಪರಿಷತ್ ಸದಸ್ಯೆ ಬಲ್ಕಿಶ್‌ ಬಾನುರವರಿಗೆ ಜನ್ಮ ದಿನದ ಶುಭಾಶಯ ಕೋರಿ ವಿವಿಧ ಬೇಡಿಕೆ ಈಡೇರಿಸಲು ಮನವಿ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರದ ಶ್ರೀ ಡಿ.ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ವತಿಯಿಂದ ವಿಧಾನಪರಿಷತ್ ಸದಸ್ಯೆ ಬಲ್ಕಿಶ್‌ಬಾನುರವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುವ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಟ್ರಸ್ಟ್ ಛೇರ್ಮನ್ ಆರ್.ವೇಣು ಗೋಪಾಲ್‌ ರವರು ಕ್ಷೇತ್ರದ ಸರ್ವ ತೋಮುಖ ಅಭಿವೃದ್ಧಿಗಾಗಿ ಹೋರಾಟ ಪ್ರಾರಂಭಿಸಿ ಮುಂಬರುವ ಜನವರಿಗೆ 50 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ರಾಜ್ಯ ಸರ್ಕಾರದ ಸಹಕಾರ ದಿಂದ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಪಣತೊಟ್ಟಿ ರುವುದರಿಂದ ಪ್ರಾಥಮಿಕ ಹಂತವಾಗಿ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗಿದೆ.

ತಾಲ್ಲೂಕಿನ ಭದ್ರಾ ಜಲಾಶಯದ ಮುಂಭಾಗ ದಲ್ಲಿ ಖಾಲಿ ಇರುವ ನೂರಾರು ಎಕರೆ ವಿಶಾಲ ವಾದ ಖಾಲಿ ಜಾಗದಲ್ಲಿ ಕೆ.ಆರ್.ಎಸ್ ಮಾದರಿ ಯಲ್ಲಿ ಅಭಿವೃದ್ಧಿಪಡಿಸಿ ಆಕರ್ಷ ಣೀಯ ಪ್ರವಾಸಿಗರ ತಾಣವನ್ನಾಗಿ ಮಾಡುವುದು. ಆರಳಿಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿ ಗೊಂದಿ ಗ್ರಾಮ ದಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಸಮೀಪ ವಿರುವ ಖಾಲಿ ಜಾಗದಲ್ಲಿ ಉದ್ಯಾನವನ್ನು ಅಭಿವೃದ್ಧಿ ಪಡಿಸಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವುದು. ಗೊಂದಿ ಅಣೆಕಟ್ಟಿ ಯಲ್ಲಿ ತಡೆಗೋಡೆ ಹಾಗೂ ಚೈನ್‌ಲಿಂಕ್ ಮೆಸ್ ಇಲ್ಲದೇ ಪ್ರವಾಸಿ ಗರು ಅಪ್ಪಿತಪ್ಪಿ ಆಣೆಕಟ್ಟು ಕೆಳಗೆ ಬಿದ್ದು ಸಾವು ಸಂಭವಿಸುವ ಸಂಭವವಿರು ವುದರಿಂದ ಇದನ್ನು ತಡೆಗಟ್ಟಲು ಹಾಗೂ ಸೂಕ್ತ ರಕ್ಷಣೆ ಒದಗಿಸಲು ಗೊಂದಿ ಆಣೆಕಟ್ಟು ಸುತ್ತಲೂ ಚೈನ್ ಲಿಂಕ್ ಕಲ್ಪಿಸುವುದು. ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲಾ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಆಣೆಕಟ್ಟಿನಿಂದ ಕಡೆಹಂಚಿನ ಗ್ರಾಮ ದವರೆಗೂ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ ಮಾಡುವುದು. ತುಂಗಾ ಅಣೆಕಟ್ಟಿನಲ್ಲಿ ಹೂಳು ತೆಗೆಯುವುದು ಹಾಗೂ ತುಂಗಾ ಅಣೆಕಟ್ಟಿ ನಲ್ಲಿರುವ ಹೂಳು ತೆಗೆಯಲು ಸರ್ಕಾರದಿಂದ ಅಗತ್ಯವಿರುವ ಅನುದಾನ ಬಿಡುಗಡೆಗೊಳಿಸುವಂತೆ ಮನವಿಯಲ್ಲಿ ಕೋರಲಾಗಿದೆ.

ಮನವಿ ಸಲ್ಲಿಕೆ ಸಂದರ್ಭದಲ್ಲಿ ಟ್ರಸ್ಟ್ ಗೌರವಾಧ್ಯಕ್ಷ ವಿಶ್ವೇಶ್ವರರಾವ್, ಸಂಚಾಲಕ ಎಂ.ವಿ.ಚಂದ್ರಶೇಖರ್, ಕಾಂಗ್ರೆಸ್ ಮುಖಂಡ ಮೊಹಮ್ಮದ್ ರಫಿ ಇನ್ನಿತರರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು