ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಿಲ್ಲೆಗೆ ಮಾದರಿ: ರಾಜ್ಯಕ್ಕೆ ಮಾದರಿಯಾಗಲಿ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲೂಕಿನ ದಾನವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಿಲ್ಲೆಗೆ ಮಾದರಿ ಶಾಲೆಯಾಗಿದ್ದು ಶಿಕ್ಷಕರು ಮತ್ತು ಸಮುದಾಯದ ಸಹಾಯದಿಂದ ಉತ್ತಮ ಕಲಿಕಾ ವಾತಾವರಣವು ನಿರ್ಮಾಣ ಗೊಂಡಿದ್ದು, ರಾಜ್ಯಕ್ಕೆ ಮಾದರಿಯಾಗಲಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ ಹಾರೈಸಿದರು. 

ಶಾಲೆಯಲ್ಲಿ ಈಚೆಗೆ ಕಲಿಕಾ ಪರಿಸರ, ಸ್ಮಾರ್ಟ್ ಕ್ಲಾಸ್ ಮತ್ತು ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. 

ಇದೆ ಸಂದರ್ಭದಲ್ಲಿ ಶಾಲೆಯ ಹಿರಿಯ ಶಿಕ್ಷಕಿ ಪ್ರಭಾವತಿ ಶಿರಸಂಗಿ ಇವರ ನಿವೃತ್ತಿಯ ಪ್ರಯುಕ್ತ ಬೀಳ್ಕೊಡುಗೆ ಸಮಾರಂಭ ನೆರವೇರಿತು.  

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಕೃಷ್ಣ ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಸದಸ್ಯರು,ಪೋಷಕರು, ಗ್ರಾಮದ ಮುಖಂಡರು, ಕ್ಷೇತ್ರ ಸಮನ್ವಯಾಧಿ ಕಾರಿ ಪಂಚಾಕ್ಷರಿ, ಅಕ್ಷರ ದಾಸೋಹದ ನಿರ್ದೇಶಕ ಗಣೇಶ್,ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿರಾಜ್, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಎಂ ಎಸ್, ನಿರ್ದೇಶಕರು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹೇಮಂತ್ ಕುಮಾರ್ ಭೇಟಿನೀಡಿ ಶಾಲೆಯ ಕಲಿಕಾ ಪರಿಸರ, ಉದ್ಯಾನ ವನ, ಭದ್ರಾ ಜಲಾಶಯದ ಮಾದರಿ, ಡಿಜಿಟಲ್ ಗ್ರಂಥಾಲಯಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಶಿಕ್ಷಕ ಆನಂದರಾವ್ ಸ್ವಾಗತಿಸಿ, ಅರ್ಜುನ್ ವಂದಿಸಿದರೆ, ವೀಣಾ ಕಾರ್ಯಕ್ರಮ ನಿರೂಪಿಸಿದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು