ಜಿಲ್ಲೆಯಾದ್ಯಂತ ಆ.18ರ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ವಿಜಯ ಸಂಘರ್ಷ ನ್ಯೂಸ್ 
ಶಿವಮೊಗ್ಗ: ಭಾರೀ ಮಳೆಯ ಹಿನ್ನೆಲೆ ಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಆ.18ರ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆ ದಿದೆ. ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.

ಮುoಜಾಗ್ರತಾ ಕ್ರಮವಾಗಿ ಅಂಗನ ವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜು ಗಳಿಗೂ ಸಹ ರಜೆ ಘೋಷಣೆ ಮಾಡಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು