ಜಿಲ್ಲಾ ಕಾಂಗ್ರೆಸ್ ವತಿಯಿಂದ ಆ:20 ಕ್ಕೆ ಡಿ.ದೇವರಾಜ ಅರಸು ಹಾಗೂ ರಾಜೀವ್ ಗಾಂಧಿ ಜಯಂತಿ ಆಚರಣೆ

ವಿಜಯ ಸಂಘರ್ಷ ನ್ಯೂಸ್ 
ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆ: 20 ರಂದು ಹಿಂದುಳಿದ ವರ್ಗ ಗಳ ಆಶಾಕಿರಣ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಹಾಗೂ ಭಾರತರತ್ನ ದೇಶದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮ ದಿನಾಚರಣೆಯನ್ನು ಆಚರಿಸಲಾ ಗುವುದು ಎಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ಪತ್ರಿಕಾ ಹೇಳಿಕೆ ಯಲ್ಲಿ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 10 ಘಂಟೆಗೆ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್ ಇವರ ಅಧ್ಯಕ್ಷತೆ ಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮ ದಲ್ಲಿ ಶಾಸಕರು, ಮಾಜಿ ಶಾಸಕರು, ನಿಗಮ-ಮಂಡಳಿಗಳ ಅಧ್ಯಕ್ಷರು ಗಳು, ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು,ಪದಾಧಿಕಾರಿಗಳು, ಪಕ್ಷದ ಮುಖಂಡರು,ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಲ್ಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು