ಭದ್ರಾವತಿ-ಕೋಟ್ಪಾ ಪ್ರಕರಣ: ಹೊಳೆಹೊನ್ನೂರು ವಿವಿಧೆಡೆ ದಿಢೀರ್‌ ದಾಳಿ 63 ಕೇಸ್‌ ದಾಖಲು

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲ್ಲೂಕಿನ ಹೊಳೆ ಹೊನ್ನೂರು ನಲ್ಲಿ ಅಂಗಡಿಗಳ ಮೇಲೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಿಸಿದವರ ವಿರುದ್ಧ 63 ಕೋಟ್ಪಾ ಪ್ರಕರಣ ದಾಖಲು ಮಾಡಿ 4800 ರೂ ದಂಡ ಸಂಗ್ರಹಿಸಿದ್ದಾರೆ.
ಪಟ್ಟಣದ ವಿವಿಧೆಡೆ ಶುಕ್ರವಾರ ಕಾರ್ಯಾಚರಣೆ ನಡೆಸಿ, ಸಾರ್ವಜನಿ ಕರಿಗೆ ಕೋಟ್ಪಾ ಕಾಯ್ದೆ ಕುರಿತು ಮಾಹಿತಿ ನೀಡಿದರು. 

ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಹೇಮಂತ್ ರಾಜ್ ಅರಸ್ ಕೆ ಎಂ, ತಂಬಾಕು ನಿಯಂತ್ರಣ ಕಾರ್ಯಕ್ರಮ ಜಿಲ್ಲಾ ಸಲಹೆಗಾರ ರವಿರಾಜ್ ಜಿ ಕೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಕ ಆನಂದಮೂರ್ತಿ, ಹೊಳೆ ಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಹಾಲಸ್ವಾಮಿ, ಸುನಿಲ್, ಲೋಕೇಶ್, ಅಲ್ಲಾ ಉದ್ದಿನ್ ತಾಜ್, ಪ್ರವೀಣ್, ಗೋವರ್ಧನ್, ಕಿರಣ್, ಹಾಗೂ ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು