ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರದ ನ್ಯೂಟೌನ್ ಸೆಂಟ್ ಚಾಲ್ಸ್ ಆಂಗ್ಲ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶುಕ್ರವಾರ ಹಮ್ಮಿಕೊಳ್ಳ ಲಾಗಿದ್ದ ಕಾರ್ಯಕ್ರಮದಲ್ಲಿ ಸ್ನೇಹಜೀವಿ ಬಳಗದ ಪೊಲೀಸ್ ಉಮೇಶ್ ಧ್ವಜಾರೋಹಣವನ್ನು ನೆರವೇರಿಸಿ ಧ್ವಜ ವಂದನೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯಕ್ಕಾಗಿ ಬಲಿಯಾದ ಸೇನಾನಿ ಗಳನ್ನು,ನಾಯಕರನ್ನು ಸ್ಮರಿಸಬೇಕು. ಜೊತೆಗೆ ಮುಂದಿನ ಪೀಳಿಗೆಗೂ ನಾಯಕರ ಮಹತ್ವವನ್ನು ಸಾರಬೇಕು. ದೇಶದ ಉನ್ನತಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು. ತಾವು ಈ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮಾಡಿ, ಇಂದು ಪೊಲೀಸ್ ಉದ್ಯೋಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಾಗಿ ತಿಳಿಸಿದ ಅವರು ಬಾಲ್ಯದ ನೆನಪು ಮೆಲಕು ಹಾಕಿದರು.
ಈ ಶಾಲೆಯ ಹಳೆಯ ವಿದ್ಯಾರ್ಥಿ ಯಾದ ನನ್ನನ್ನು ಗುರುತಿಸಿ ಧ್ವಜಾ ರೋಹಣ ಮಾಡಲು ಅನುವು ಮಾಡಿಕೊಟ್ಟ ಶಾಲಾ ಆಡಳಿತ ಮಂಡಳಿಗೆ ಕೃತಜ್ಞತೆ ತಿಳಿಸಿದರು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿವತಿಯಿಂದ ಸನ್ಮಾನಿಸಿ ಗೌರವಿಸ ಲಾಯಿತು.ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಶಿಕ್ಷಕ, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.