ಭದ್ರಾವತಿ-ತಾರೀಕಟ್ಟೆ ಗ್ರಾಮದಲ್ಲಿ ಉಚಿತ ವೈಧ್ಯಕೀಯ ಆರೋಗ್ಯ ಶಿಬಿರ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲ್ಲೂಕಿನ ತಾರೀಕಟ್ಟೆ ಗ್ರಾಮದಲ್ಲಿ ಶಿವಮೊಗ್ಗದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಗಳಾದ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಶಂಕರ ಕಣ್ಣಿನ ಆಸ್ಪತ್ರೆ, ತಾಲ್ಲೂಕು ಸರ್ಕಾರಿ ಆಸ್ಪತ್ರೆ ಮತ್ತು ವಿಐಎಸ್ಎಲ್ ಆಸ್ಪತ್ರೆಗಳ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು.

ಹೃದಯಶಾಸ್ತ್ರ, ಮೂಳೆ ಚಿಕಿತ್ಸೆ, ಸಾಮಾನ್ಯ ತಪಾಸಣೆ, ನೇತ್ರವಿಜ್ಞಾನ, ದಂತವೈದ್ಯಶಾಸ್ತ್ರ ಮತ್ತು ಸ್ತ್ರೀರೋಗ ಶಾಸ್ತ್ರದಂತಹ ಕ್ಷೇತ್ರಗಳಲ್ಲಿ ಅನುಭವಿ ತಜ್ಞವೈದ್ಯರು ಭಾಗವಹಿಸುವ ಮೂಲಕ ಆರೋಗ್ಯ ಸಮಾಲೋಚನೆ ಮತ್ತು ರೋಗನಿರ್ಣಯ ಸೇವೆಗಳನ್ನು ನೀಡಲಾಯಿತು. 

ಈ ಉಪಕ್ರಮದ ಭಾಗವಾಗಿ ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ಕಣ್ಣಿನ ಪರೀಕ್ಷೆ. ದಂತ ತಪಾಸಣೆ, ಎಲೆಕ್ಟೋಕಾರ್ಡಿ ಯೋಗ್ರಾಮ್ (ಇಸಿಜಿ), 2ಡಿ ಎಕೋಕಾರ್ಡಿ ಯೋಗ್ರಫಿ (2ಡಿ ಎಕೋ) ತಪಾಸಣೆಗಳನ್ನು ಮಾಡಲಾಯಿತು.

ವಿಐಎಸ್‌ಎಲ್ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಾಂದವಾನಿ, ಮತ್ತು ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಕೆ.ಎಸ್.ಸುರೇಶ್ ಕಾರ್ಯಕ್ರಮ ಉದ್ಘಾಟಿಸಿದರು.

ವಿಐಎಸ್‌ಎಲ್‌ ಅಧಿಕಾರಿಗಳಾದ ಎಲ್. ಪ್ರವೀಣ್ ಕುಮಾರ್, ಡಾ:ಕೆ.ಎಸ್.ಸುಜೀತ್ ಕುಮಾರ್, ಡಾ: ಸುಷ್ಮಾ, ಉಪ ಮುಖ್ಯ ವೈದ್ಯಾಧಿಕಾರಿ, ಡಾ: ಎಸ್.ಎನ್. ಸುರೇಶ್, ದಂತ ವೈದ್ಯ ಎಮ್.ಎಲ್. ಯೋಗೀಶ್, ಸಹಾಯಕ ಪ್ರಬಂಧಕರು(ವೈದ್ಯಕೀಯ) ಅಪರ್ಣ, ಶಂಕರ ಕಣ್ಣಿನ ಆಸ್ಪತ್ರೆಯ ಡಾ: ಶೈರಿನ್ ನಾಝ್, ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ 
ಡಾ:ಸುಪ್ರೇಥ್, ಡಾ: ಬಸವ ರಾಜ್, ಭದ್ರಾವತಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಪ್ರೇಮಲತಾ, ಹಿರಿಯೂರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಭಾಗ್ಯಮ್ಮ, ತಾರೀಕಟ್ಟೆ ಶ್ರೀ ರಾಮ ದೇವಸ್ಥಾನ ಸೇವಾ ಟ್ರಸ್ಟ್‌ನ ಅಧ್ಯಕ್ಷ ಜಯರಾಮ್, ಗ್ರಾ ಪಂ ಸದಸ್ಯ ಬಿ.ಸುರೇಶ್, ಕಾರ್ಯದರ್ಶಿ ವೆಂಕಟೇಶ್, ಶ್ರೀ ರಾಮ ದೇವಸ್ಥಾನ ಸೇವಾ ಟ್ರಸ್ಟ್ ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು