ಭದ್ರಾವತಿ-ಭದ್ರಾ ಜಲಾಶಯಕ್ಕೆ ಶಾಸಕಿ ಶಾರದಾ ಪೂರ್ಯನಾಯ್ಕ ನೇತೃತ್ವದಲ್ಲಿ ಬಾಗಿನಾರ್ಪಣೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತುಂಬಿದ ಭದ್ರಾ ಜಲಾಶಯಕ್ಕೆ ಸೋಮವಾರ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ ರವರ ನೇತೃತ್ವದಲ್ಲಿ ಬಾಗಿನಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 

ಈ ಸಂದರ್ಭದಲ್ಲಿ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ಸತೀಶ್ ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ರೈತಬಾಂಧವವರಿಗೆ, ಸಮಾಜ-ಸಂಘ ಸಂಸ್ಥೆಯವರಿಗೆ ಹಿರಿಯ ಮುಖಂಡರು ಗಳಿಗೆ, ಚುನಾಯಿತ ಪ್ರತಿನಿಧಿಗಳಿಗೆ ಶಾಸಕಿ ಶಾರದಾ ಪೂರ್ಯ ನಾಯ್ಕ ಕೃತಜ್ಞತೆ ಸಲ್ಲಿಸಿದ್ದಾರೆ.

1 ಕಾಮೆಂಟ್‌ಗಳು

ನವೀನ ಹಳೆಯದು