ವಿಜಯ ಸಂಘರ್ಷ ನ್ಯೂಸ್
ಸಾಗರ: ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಯಲ್ಲಿ ಮುಂಜಾಗ್ರತಾ ಕ್ರಮ ವಾಗಿ ಹೊಸನಗರ ಮತ್ತು ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಆ.28) ರಜೆ ಘೋಷಣೆ ಮಾಡಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.
ಎರಡು ತಾಲೂಕುಗಳ ವ್ಯಾಪ್ತಿಯಲ್ಲಿ ಅತಿ ಹೆಚ್ಚಿನ ಮಳೆಯಾಗುತ್ತಿರುವು ದರಿಂದ ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸಿ ರಜೆ ಘೋಷಿಸಲಾಗಿದೆ.
ಮುಂದಿನ ರಜಾ ದಿವಸಗಳಲ್ಲಿ ತರಗತಿ ಗಳನ್ನು ನಡೆಸಿ ಪಾಠ ಪ್ರವಚನಗಳನ್ನು ಸರಿದೂಗಿಸಲು ಆದೇಶದಲ್ಲಿ ತಿಳಿಸಲಾಗಿದೆ.