ಭದ್ರಾವತಿ-ಧರ್ಮಸ್ಥಳದಲ್ಲಿ ಪತ್ರಕರ್ತರ ಮೇಲಿನ ಹಲ್ಲೆ ಖಂಡನೀಯ:ದಸಂಸ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಧರ್ಮಸ್ಥಳದಲ್ಲಿ ಗೂಂಡಾ ಗಳಿಂದ ಪತ್ರಕರ್ತರ ಮೇಲೆ ಮಾರಣಾಂತಿಕ ಹಲ್ಲೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕ‌ರವಾದ) ನೇತೃತ್ವದಲ್ಲಿ ಶುಕ್ರವಾರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. 

ಪತ್ರಕರ್ತರ ಮೇಲಿನ ಹಲ್ಲೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಘಟನೆಯಾಗಿ ರುತ್ತದೆ. ಘಟನೆಯಲ್ಲಿ ನಾಲ್ವರು ಪತ್ರಕರ್ತರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಾದ್ಯಮ ಗಳಿಂದ ತಿಳಿದು ಬಂದಿದ್ದು, ಘಟನೆ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. 

ಪತ್ರಕರ್ತರ ಮೇಲೆ ದಾಳಿ ನಡೆಸಿರುವ ಗೂಂಡಾಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಂಡು ನೊಂದ ಪತ್ರಕರ್ತ ರಿಗೆ ಸೂಕ್ತ ರಕ್ಷಣೆ ಒದಗಿಸಿಬೇಕು ಹಾಗೂ ಹಲ್ಲೆಗೊಳ ಗಾದ ಪತ್ರಕರ್ತರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಿ ನ್ಯಾಯ ದೊರಕಿಸಲು ಅಗ್ರಹಿಸಿದರು. 

ಸಮಿತಿ ಪ್ರಧಾನ ಸಂಚಾಲಕ ಎಸ್. ಪುಟ್ಟರಾಜು ನೇತೃತ್ವ ವಹಿಸಿದ್ದರು. ಭಾರತೀಯ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಚಂದ್ರಪ್ಪ, ಕರುನಾಡ ಹಿತರಕ್ಷಣೆ ಸಮಿತಿ ರಾಜ್ಯಾಧ್ಯಕ್ಷ ವೈ.ಶಶಿಕುಮಾರ್,ಅತ್ತಿಗುಂದ ರುದ್ರೇಶ್, ಗೋವಿಂದರಾಜು, ಪ್ರಭಾಕರ್ ಹೆಬ್ಬಂಡಿ, ಶಿವರಾಜ್ ಸೇರಿದಂತೆ ಅನೇಕರು ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು