ವಿಜಯ ಸಂಘರ್ಷ ನ್ಯೂಸ್
ಶಿವಮೊಗ್ಗ: ಸಾಮಾಜಿಕ ಕ್ಷೇತ್ರದಲ್ಲಿ ಜೆಸಿಐ ಸಂಸ್ಥೆ ನಿರಂತರವಾಗಿ ತೊಡಗಿಸಿಕೊಂಡು ಉತ್ತಮ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಜೆಸಿಐ ಸಮೃದ್ಧಿ ಘಟಕದ ಅಧ್ಯಕ್ಷ ನರಸಿಂಹಮೂರ್ತಿ ಹೇಳಿದರು.
ಇಸ್ಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಗೆ ನೀರಿನ ಶುದ್ಧೀಕರಣ ಯಂತ್ರದ ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿ, ಜೆಸಿ ಸಂಸ್ಥೆಯು ಮಾನವೀಯ ಸೇವೆಗಳ ಜೊತೆಗೆ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡುತ್ತಿದೆ. ಶುದ್ಧ ನೀರಿನ ಸೇವನೆಯಿಂದ ಮಕ್ಕಳ ಆರೋಗ್ಯ ಉತ್ತಮವಾಗುತ್ತದೆ. ಕಾಯಿಲೆ ಗಳಿಂದ ದೂರ ಇರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಜೆಸಿಐ ಸಂಸ್ಥೆಯು ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸುವ, ಶಾಲೆಗಳ ಅಭಿವೃದ್ಧಿ ಸಹಕಾರ ನೀಡುವ ಸೇವಾ ಚಟುವಟಿಕೆಗಳನ್ನು ನಡೆಸು ತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವಾ ಚಟುವಟಿಕೆಗಳನ್ನು ಹಮ್ಮಿ ಕೊಳ್ಳುವ ಉದ್ದೇಶವಿದೆ ಎಂದರು.
ಮಾಜಿ ಅಧ್ಯಕ್ಷ ಯಲ್ಲಪ್ಪ ಗೌಡ ಮಾತನಾಡಿ, ಸರ್ಕಾರದ ಸೌಲಭ್ಯಗಳ ಜತೆ ಸಂಘ ಸಂಸ್ಥೆಗಳ ನೆರವು ಸಹ ಮುಖ್ಯ. ಸರ್ಕಾರಿ ಶಾಲೆಯ ಮಕ್ಕಳಿಗೆ ಅಗತ್ಯ ಸಾಮಗ್ರಿಗಳನ್ನು ಮತ್ತು ಲೇಖನ ಸಾಮಗ್ರಿಗಳನ್ನು, ಕುಡಿಯುವ ನೀರಿನ ಯಂತ್ರವನ್ನು ವಿತರಿಸುತ್ತಿದ್ದೇವೆ ಎಂದರು.
ಜೆಸಿಐ ಸಮೃದ್ಧಿ ಘಟಕದ ಕಾರ್ಯದರ್ಶಿ ಗಾಯತ್ರಿ ಯಲ್ಲಪ್ಪಗೌಡ, ಉಪಾಧ್ಯಕ್ಷೆ ಅನಿತಾ ಸೀರಿಲ್, ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.