ಸಾಗರ-ಲೋಕಾಯುಕ್ತ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ

ವಿಜಯ ಸಂಘರ್ಷ ನ್ಯೂಸ್ 
ಸಾಗರ: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿ ಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸೆ: 19 ರಂದು ಬೆಳಿಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ರವರೆಗೆ ಸಾಗರ ತಾಲೂಕು ಕಚೇರಿ ಸಭಾಂಗಣದಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ. 

ಸಾರ್ವಜನಿ ಕರು ಈ ಸಭೆಗೆ ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನು ಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ಸರ್ಕಾರಿ ಹಣ/ಅಧಿಕಾರ ದುರುಪ ಯೋಗ, ಕಳಪೆ ಕಾಮಾಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಸಂಪಾದನೆ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಲಿಖಿತ ವಾಗಿ ಅಹವಾಲು ಸಲ್ಲಿಸಬಹುದೆಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು