ಭದ್ರಾವತಿ-ಸರ್.ಎಂ ವಿಶ್ವೇಶ್ವರಾಯರವರ ಕೊಡುಗೆ ಅಪಾರ:ಸಂಸದ ಬಿ.ವೈ.ಆರ್

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಮಲೆನಾಡಿಗೆ ಭಾರತರತ್ನ, ದೇಶದ ಅಪ್ರತಿಮ ಅಭಿಯಂತರ ಸರ್.ಎಂ.ವಿಶ್ವೇಶ್ವರಾಯರವರ ಕೊಡುಗೆ ಅಪಾರ ವಾಗಿದ್ದು, ಅವರ ಸ್ಮರಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು. 

ಅವರು ವಿಐಎಸ್ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ವತಿ ಯಿಂದ ನ್ಯೂಟೌನ್ ಮಹಾತ್ಮ ಗಾಂಧಿ ಉದ್ಯಾನವನ ಮುಂಭಾಗದ ಶ್ರೀ ರಾಮ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳ ಲಾಗಿದ್ದ ಸರ್.ಎಂ ವಿಶ್ವೇಶ್ವರಾಯ ರವರ 165 ನೇ ಜನ್ಮ ದಿನಾಚರಣೆ ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ವಿಶ್ವೇಶ್ವರಾಯರವರು ಜಿಲ್ಲೆಯಲ್ಲಿ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆ ಸ್ಥಾಪನೆ ಜೊತೆಗೆ ಲಿಂಗನಮಕ್ಕಿ ಜಲಾಶಯ, ಜೋಗ ಜಲಪಾತ ಮಹಾತ್ಮ ಗಾಂಧಿ ವಿದ್ಯುತ್‌ ಉತ್ಪಾದನಾ ಕೇಂದ್ರ ಸೇರಿದಂತೆ ಹಲವು ಕೊಡುಗೆ ನೀಡಿದ್ದಾರೆ. ಮಲೆನಾಡಿನ ಜನರ ಅನ್ನದಾತರಾಗಿದ್ದಾರೆ ಎಂದರು.

ನಿವೃತ್ತ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿಕೊಡಲು ಬದ್ಧನಾಗಿದ್ದೇನೆ. ಈಗಾಗಲೇ ಹಲವು ಸಮಸ್ಯೆಗಳು ಬಗಹರಿದಿವೆ. ಮನೆ ಬಾಡಿಗೆ ಹೆಚ್ಚಳ ಕಡಿಮೆಗೊಳಿಸುವ ಸಂಬಂಧ ಉಕ್ಕು ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಮೆಸ್ಕಾಂ ನಿವೃತ್ತ ಅಭಿಯಂತರ ಜೆ. ಶಿವಪ್ರಸಾದ್ ಸರ್.ಎಂ ವಿಶ್ವೇಶ್ವರಾಯ ರವರು ಕುರಿತು ಉಪನ್ಯಾಸ ನೀಡಿದರು. ಕಲ್ಯಾಣ ಕೇಂದ್ರದ ಅಧ್ಯಕ್ಷ ಅಧ್ಯಕ್ಷ ಬಿ.ಜಿ ರಾಮಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು.

ಕಲ್ಯಾಣ ಕೇಂದ್ರದ ಉಪಾಧ್ಯಕ್ಷ ಎಸ್. ಅಡವೀಶಯ್ಯ, ಪ್ರಧಾನ ಕಾರ್ಯದರ್ಶಿ ಬಿ. ಮಂಜುನಾಥ್, ಖಜಾಂಚಿ ಎಲ್. ಬಸವರಾಜಪ್ಪ, ಕಾರ್ಯಕಾರಿ ಸಮಿತಿ ಸದಸ್ಯ ಹಾ.ರಾಮಪ್ಪ, ಎಸ್.ಎಸ್ ಭೈರಪ್ಪ, ಕೆಂಪಯ್ಯ, ಜಿ.ಶಂಕರ್, ಬಿ.ಕೆ ರವೀಂದ್ರ ರೆಡ್ಡಿ, ಎಂ. ನಾಗರಾಜ, ಲಾಜರ್ ಮತ್ತು ಗಜೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು