ಯರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪೋಷಣಾ ಅಭಿಯಾನ: ಸೀಮಂತ ಕಾರ್ಯ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲ್ಲೂಕಿನ ಯರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪೋಷಣಾ ಅಭಿಯಾನ /ಸೀಮಂತ ಕಾರ್ಯ ಮತ್ತು ಅನ್ನಪ್ರಾಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಸ್ ಕೆ ಮಾಲತಿ ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗರ್ಭಿಣಿಯರನ್ನು ಕರೆಸಿ ಸೀಮಂತ ಕಾರ್ಯಕ್ರಮ ನಡೆಸಲಾಯಿತು. 

ಈ ಸಂದರ್ಭದಲ್ಲಿ ಗ್ರಾ ಪಂ ಉಪಾಧ್ಯಕ್ಷೆ ಶ್ವೇತಾ, ಸದಸ್ಯೆ ಸಂಗಮ್ಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಮಾರ್, ಡಾ:ಗಿರೀಶ್ ಎಚ್.ಎಸ್, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಕೋಗಲೂರು ತಿಪ್ಪೇಸ್ವಾಮಿ, ಗ್ರಂಥಾಲಯ ಮೇಲ್ವಿ ಚಾರಕರಾದ ಮಾಲಾ.ಕೆಎಸ್, ಆರೋಗ್ಯ ಸಹಾಯಕಿ ಹಾಗೂ ಅಂಗನವಾಡಿ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು