ಭದ್ರಾವತಿ-ಡಾ:ವಿಷ್ಣುವರ್ಧನ್ ಹುಟ್ಟು ಹಬ್ಬ: ರಕ್ತದಾನ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಕರ್ನಾಟಕ ರತ್ನ ಸಾಹಸಸಿಂಹ ಡಾ: ವಿಷ್ಣುವರ್ಧನ್ ಅವರ ಹುಟ್ಟು ಹಬ್ಬದ ಅಂಗವಾಗಿ ನಗರದ ಜೀವ ಸಂಜೀವಿನಿ ರಕ್ತ ಕೇಂದ್ರದ ವತಿಯಿಂದ ಕುವೆಂಪು ವಾಹನ ಚಾಲಕರ ಮತ್ತು ಮಾಲೀಕರ ಸಂಘ ಮತ್ತು ವಿಷ್ಣುಸೇನಾ ಸಮಿತಿ ಸಮಿತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಕುವೆಂಪು ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಹಾಗೂ ಇತರರರು ಸೇರಿದಂತೆ ಒಟ್ಟು 21 ಮಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.

ರಕ್ತನಿಧಿ ಕೇಂದ್ರದ ಮುಖ್ಯಸ್ಥ ಹರೀಶ್, ಸಂಘದ ಅಧ್ಯಕ್ಷ ಪ್ರದೀಪ್ ಸೇರಿದಂತೆ ಪದಾಧಿಕಾರಿಗಳು ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು