ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರದ ಹೊಸಸೇತುವೆ ರಸ್ತೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದ ಶ್ರೀ ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆ ಕನ್ನಡ ಪ್ರೌಢಶಾಲೆಯ ಹಿಂದಿ ಭಾಷಾ ಶಿಕ್ಷಕಿ ಡಾ: ತ್ರಿವೇಣಿ ಎನ್ ಇವರು ಈ ಬಾರಿಯ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿರುತ್ತಾರೆ.
ಗೌರವ ಡಾಕ್ಟರೇಟ್ ಪ್ರಶಸ್ತಿ ಪುರಸ್ಕೃ ತರು, ಹಾಗೂ ರಾಜ್ಯಮಟ್ಟದ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತರು. ಭರತನಾಟ್ಯ ಕಲಾವಿದೆ, ರಂಗ ಕಲಾವಿದೆಯಾಗಿರುವ ಇವರು ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಇವರಿಗೆ ಶಾಲಾ ಆಡಳಿತ ಮಂಡಳಿ,ದಲಿತ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಅಭಿನಂದಿಸಿವೆ.