ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನೂತನ ಪದಾಧಿಕಾರಿಗಳು ವೇದಿಕೆ ಸಂಘಟನೆಗೆ ಒತ್ತು ನೀಡಿ ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡರ ಬಣ) ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಡಾ.ಜ್ಯೋತಿ ಸೋಮಶೇಖರ್ ನೂತನ ಪದಾಧಿ ಕಾರಿಗಳಿಗೆ ಕರೆ ನೀಡಿದರು.
ಈಚೆಗೆ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಮುಂಭಾಗದ ನಂದಿನಿ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವೇದಿಕೆಯ ಮಹಿಳಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿ, ಆಯ್ಕೆಯಾದ ಎಲ್ಲಾ ನೂತನ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ತಿಳಿಸಿದರು.
ನೂತನ ಪದಾಧಿಕಾರಿಗಳಾಗಿ ಆಯ್ಕೆ:
ಅಧ್ಯಕ್ಷರಾಗಿ ರೂಪ ನಾಗರಾಜ, ಜಿಲ್ಲಾ ಮಹಿಳಾ ಕಾರ್ಯದರ್ಶಿಯಾಗಿ ಮಹೇಶ್ವರಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮೆಹರುನ್ನಿಸ ಇವರನ್ನು ನೇಮಕ ಮಾಡಲಾಯಿತು.
ವೇದಿಕೆಯಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಕೇಬಲ್ ಮಂಜು, ಭದ್ರಾವತಿ ತಾಲೂಕ್ ಅಧ್ಯಕ್ಷ ವೆಂಕಟೇಶ್, ಶಿವಮೊಗ್ಗ ತಾಲೂಕ ಮಹಿಳಾ ಅಧ್ಯಕ್ಷೆ ಜಾನವಿ ರೆಡ್ಡಿ ಸೇರಿದಂತೆ ವೇದಿಕೆಯ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿ ಗಳು ಉಪಸ್ಥಿತರಿದ್ದರು.