ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಮಹಮದ್ ಪೈಗಂಬರರ ಜನ್ಮದಿನ ಸಂಭ್ರಮಾಚರಣೆ ಅಂಗ ವಾಗಿ ನಗರದಲ್ಲಿ ಸೋಮವಾರ ಹಮ್ಮಿಕೊಳ್ಳಲಾ ಗಿದ್ದ ಈದ್ ಮಿಲಾದ್ ಮೆರವಣಿಗೆ ಸಂದರ್ಭ ದಲ್ಲಿ ಕೆಲ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾ ಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಮಂಗಳವಾರ ಮಾಧವ ಚಾರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹಿಂದೂಪರ ಸಂಘಟನೆಗಳ ಹಾಗೂ ಬಿಜೆಪಿ,ಜೆಡಿಎಸ್ ಪಕ್ಷಗಳ ಮುಖಂಡರು, ಅಭಿಮಾನಿಗಳು ರಾಷ್ಟ್ರಧ್ವಜ ಹಿಡಿದು ಘಟನೆಯನ್ನು ಖಂಡಿಸಿ, ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ ಪ್ರಮುಖರು, ಭದ್ರಾವತಿ ನಗರದಲ್ಲಿ ಈ ರೀತಿಯ ಕೃತ್ಯ ನಡೆಸಿರುವುದು ಭಾರತೀಯರಾದ ನಮಗೆ ನೋವುಂಟು ಮಾಡುತ್ತದೆ. ದೇಶದ್ರೋಹ ಕೃತ್ಯ ಯಾರೇ ಮಾಡಿದರು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಭದ್ರಾವತಿ ಮಿನಿ ಪಾಕಿಸ್ತಾನ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ತಕ್ಷಣ ಇಂತಹ ಕೃತ್ಯಗಳಿಗೆ ಪೊಲೀಸರು ಕಡಿವಾಣ ಹಾಕಬೇಕು ಎಂದು ಎಚ್ಚರಿಸಿದರು.
ಈದ್ ಮಿಲಾದ್ ಮೆರವಣಿಗೆಯಲ್ಲಿ ಯಾರೋ ಕಿಡಿಗೇಡಿಗಳು ಪಾಕಿಸ್ತಾನ ಪರ ಜಿಂದಾಬಾದ್ ಘೋಷಣೆ ಕೂಗಿದರೂ ಸಹ ಉಳಿದವರು ಮೌನವಾಗಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು ಸ್ಥಳದಲ್ಲಿದ್ದ ಪೊಲೀಸರು ಆ ಕ್ಷಣವೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳ ಬೇಕಿತ್ತು. ಆದರೆ ಈ ಕೃತ್ಯವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ಮಾಧವಚಾರ್ ವೃತ್ತದಿಂದ ತರೀಕೆರೆ ರಸ್ತೆಯ ಮಹಾತ್ಮ ಗಾಂಧಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಂತಿಮವಾಗಿ ರಾಷ್ಟ್ರಗೀತೆ ಹಾಡುವ ಮೂಲಕ ಅಂತ್ಯ ಗೊಳಿಸಲಾಯಿತು. ಪ್ರತಿಭಟನೆ ಹಿನ್ನಲೆಯಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತ ಗೊಂಡಿತ್ತು. ಪೊಲೀಸರು ಸುಗಮ ಸಂಚಾರಕ್ಕೆ ಹರಸಹಾಸ ಪಡುವಂತಾಯಿತು.
ಶಿವಮೊಗ್ಗ ಶಾಸಕ ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ತಾಲೂಕು ಮಂಡಲ ಅಧ್ಯಕ್ಷ ಜಿ.ಧರ್ಮ ಪ್ರಸಾದ್, ಗ್ರಾಮಾಂತರ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಕೂಡ್ಲಿಗೆರೆ ಹಾಲೇಶ್, ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಪ್ರಮುಖ್ ಹಾ. ರಾಮಪ್ಪ, ಜೆಡಿಎಸ್ ನಗರ ಅಧ್ಯಕ್ಷ ಆರ್ ಕರುಣಾಮೂರ್ತಿ, ಬಿ.ಜಿ ರಾಮಲಿಂಗಯ್ಯ, ಎನ್. ವಿಶ್ವನಾಥ ರಾವ್, ಎಂ. ಮಂಜುನಾಥ್, ಡಿ.ಆರ್ ಶಿವಕುಮಾರ್, ರಾಜಶೇಖರ್ ಉಪ್ಪಾರ, ಕೃಷ್ಣ ಛಲವಾದಿ, ಜಿ.ಆನಂದ್ ಕುಮಾರ್, ಯೋಗೇಶ್ ಕುಮಾರ್, ದುಗ್ಗೇಶ್ ತೇಲ್ಕರ್, ಹನುಮಂತನಾಯ್ಕ, ಧುನಷ್ ಬೋಸ್, ಕಾ.ರಾ ನಾಗರಾಜ್, ಮಹಿಳಾ ಪ್ರಮುಖ ರಾದ ಸರಸ್ವತಿ, ಅನ್ನಪೂರ್ಣ, ಶಕುಂತಲ, ಲತಾ ಪ್ರಭಾಕರ್, ಆಶಾ ಪುಟ್ಟಸ್ವಾಮಿ, ಕವಿತರಾವ್, ಸುಲೋಚನಾ ಪ್ರಕಾಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.