ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಕಲಬುರ್ಗಿ ಜಿಲ್ಲೆಯ ಮಳಖೇಡ ಗ್ರಾಮ ಪಂಚಾಯಿತಿ ಗ್ರಂಥಾಲಯದ ಹಾಗೂ ಅರಿವು ಕೇಂದ್ರದ ಮೇಲ್ವಿಚಾರಕಿ ಭಾಗ್ಯವತಿ ಸಾವಿನ ವಿರುದ್ಧ ಸೂಕ್ತ ಕ್ರಮ ಕೈ ಗೊಳ್ಳುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಗ್ರಾಮೀಣ ಗ್ರಂಥಾಲಯ ಮೇಲ್ವಿಚಾರ ಕರ ಸಂಘದ ವತಿಯಿಂದ ಬುಧವಾರ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮೃತರ ಕುಟುಂಬಕ್ಕೆ ಸರ್ಕಾರದಿಂದ ಕನಿಷ್ಠ 25 ಲಕ್ಷ ರೂ ಪರಿಹಾರ ಘೋಷಿಸಿ ಕುಟುಂಬಕ್ಕೆ ಅನುಕಂಪ ನೌಕರಿ ನೀಡುವಂತೆ ಮನವಿಯಲ್ಲಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಅರಿವು ಕೇಂದ್ರ ಮೇಲ್ವಿಚಾರಕರುಗಳಾದ ಮಾಲಾ.ಕೆ ಎಸ್.ಲಕ್ಷ್ಮಿ,ಗೀತಾ,ಯಶೋಧ,ಸುರೇಶ್, ವಿನೋದ್, ಗಣೇಶ್, ಲೋಕೇಶ್, ರಾಕೇಶ್, ಪ್ರತಾಪ್, ರಾಜಣ್ಣ, ಚನ್ನನಾಯಕ್, ಇಬ್ರಾಹಿಂ, ವೀರೇಶ್, ರೇಣುಕೇಶ್ ಮತ್ತಿತರರು ಭಾಗವಹಿಸಿದ್ದರು.