ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರದ ಲೋಕೋಪ ಯೋಗಿ ಇಲಾಖೆಯ ನಿವೃತ್ತ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ದಯಾನಂದ ರವರು ಗುರುವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು.
ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಶಿವಕುಮಾರ್ ಇವರ ಗೃಹ ಕಚೇರಿಯಲ್ಲಿ ಸೇರ್ಪಡೆ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಪಕ್ಷದ ಭಾವುಟ ನೀಡಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಚಿನ್ನಪ್ಪ, ಬಿ.ಟಿ. ನಾಗರಾಜ್, ಪಕ್ಷದ ಗ್ರಾಮಾಂತರ ಅಧ್ಯಕ್ಷ ಎಚ್.ಎಲ್.ಷಡಾಕ್ಷರಿ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಗಂಗಾಧರ್,ಆಶ್ರಯ ಸಮಿತಿ ಅಧ್ಯಕ್ಷ ಬಿ ಎಸ್.ಗೋಪಾಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.