ಸರ್ಕಾರದ ಆದೇಶ ಪಾಲಿಸದ ನ್ಯಾಯಬೆಲೆ ಅಂಗಡಿಗಳ ರದ್ದತಿಗೆ ಆಗ್ರಹ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲೂಕಿನ ನಗರ ಪ್ರದೇಶದ ನ್ಯಾಯಬೆಲೆ ಅಂಗಡಿಗಳಲ್ಲಿ ಸರಿಯಾದ ರೀತಿಯಲ್ಲಿ ಪಡಿತರ ವಿತರಣೆ ಮಾಡದೆ ಸರ್ಕಾರದ ಆದೇಶ ದಂತೆ ಕಾರ್ಯ ನಿರ್ವಹಿಸದೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್ ಗೌಡ ಆರೋಪಿಸಿದ್ದಾರೆ.

ಬುಧವಾರ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ನಗರದ ಜನ್ನಾಪುರ ಸಚ್ಚಿದಾನಂದ ಗುರುರಾಜ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಿತ ಇಲಾಖೆ ಕ್ರಮಕ್ಕೆ ಮುಂದಾಗುವಂತೆ ಅಗ್ರಹಿಸಿದರು.

ಆಹಾರ ಖಾತೆ ಸಚಿವ ಕೆ.ಎಚ್ ಮುನಿಯಪ್ಪ ರವರು ರಾಜ್ಯದಲ್ಲಿ ಒನ್ ನೇಷನ್‌, ಒನ್ ಕಾರ್ಡ್ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ. ಇದರ ಅನ್ವಯ ದೇಶದ ಯಾವುದೇ ಮೂಲೆ ಯಲ್ಲಿ ವಾಸಿಸುತ್ತಿದ್ದರೂ ಸಹ ಅವರಿಗೆ ಯಾವುದೇ ನ್ಯಾಯಬೆಲೆ ಅಂಗಡಿ ಯಲ್ಲಿ ಪಡಿತರ ವಿತರಿಸಬೇಕೆಂಬು ದಾಗಿದೆ. ಆದರೆ ಇಲ್ಲಿನ ನ್ಯಾಯಬೆಲೆ ಅಂಗಡಿ ಗಳು ಆ ರೀತಿ ಕಾರ್ಯನಿರ್ವ ಹಿಸುತ್ತಿಲ್ಲ ಎಂದು ದೂರಿದರು.

ಸರಿಯಾಗಿ ಪಡಿತರ ವಿತರಣೆ ಮಾಡದೆ ಸರ್ಕಾರದ ಆದೇಶದಂತೆ ಕಾರ್ಯ ನಿರ್ವಹಿಸದ ನ್ಯಾಯಬೆಲೆ ಅಂಗಡಿ ಗಳನ್ನು ರದ್ದು ಮಾಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು