ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ನ.30 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನ. 30 ರಂದು ಬೆಳಗ್ಗೆ 10.00ಕ್ಕೆ ವಿಮಾನದ ಮೂಲಕ ಆಗಮಿಸಿ, ಕಿಮ್ಮನೆ ಗಾಲ್ಫ್ ರೆರ್ಸಾಟ್‌ಗೆ ತೆರಳಲಿದ್ದಾರೆ. 10.45ಕ್ಕೆ ನಗರದ ಶ್ರೀ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ನಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಶ್ರೀ ಭಗವದ್ಗೀತಾ ಅಭಿಯಾನ ದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮ. 12.30ಕ್ಕೆ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಗೆ ಭೇಟಿ ನೀಡಲಿದ್ದು, ಮ. 2.45ಕ್ಕೆ ಬೆಂಗಳೂರಿಗೆ ವಾಪಸ್ಸು ತೆರಳಲಿದ್ದಾರೆ ಎಂದು ಸಚಿವರ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.