ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಮನೆ ಮಾಲೀಕ ಸಾವಿನ ಸುದ್ದಿ ತಿಳಿದು ನಾಯಿ ಕೂಡ ಪ್ರಾಣ ಬಿಟ್ಟಿರುವಂತ ಹೃದಯ ವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ.
ನಗರದ ಜಿಂಕ್ ಲೈನ್ ನಿವಾಸಿ ಲಾರೆನ್ಸ್ (61) ಮೆದುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಇವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಪಾರ್ಥಿವ ಶರೀರವನ್ನು ಮನೆಗೆ ತರಲಾಗಿತ್ತು.
ನೆಚ್ಚಿನ ಮಾಲೀಕ ಸಾವನ್ನಪ್ಪಿ, ಶವವಾಗಿ ಮಲಗಿರುವುದನ್ನು ಕಂಡ ನಾಯಿ ತೀವ್ರ ನೊಂದುಕೊಂಡಿದೆ. ಮಾಲೀಕ ಲಾರೆನ್ಸ್ ಶವದ ಪಕ್ಕದಲ್ಲೇ ಮಲಗಿ ತೀವ್ರ ದುಖ ವ್ಯಕ್ತಪಡಿಸಿದ ಶ್ವಾನವು, ಅಲ್ಲೇ ಅಂತಿಮ ಉಸಿರೆ ಳೆದಿದೆ. ಗುರುವಾರದಂದು ಲಾರೆನ್ಸ್ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಅವರೊಟ್ಟಿಗೆ ಸಾವನ್ನಪ್ಪಿದ ಶ್ವಾನವನ್ನು ಮನೆಯ ಹಿಂಭಾಗದಲ್ಲಿಯೇ ಹೂಳಲಾಗಿದೆ.
Tags
ಭದ್ರಾವತಿ-ವರದಿ