ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಗೆ ಕಾಂಗ್ರೆಸ್ ಸನ್ಮಾನ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ವಕೀಲರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಕುವೆಂಪು ವಿವಿ ಸಿಂಡಿಕೇಟ್ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಆದ ಶಿವಕುಮಾರ್ ರವರಿಗೆ ಕಾಂಗ್ರೆಸ್ ಪಕ್ಷದ ಒಬಿಸಿ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ನಗರದ ಖಾಸಗಿ ಹೋಟೆಲ್ ನಲ್ಲಿ ಒಬಿಸಿ ಘಟಕದ ಅಧ್ಯಕ್ಷ ಗಂಗಾಧರ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮುಖಂಡ ರಾದ ಮಂಜುನಾಥ್, ಮಹಮ್ಮದ್ ರಫಿ, ಎಂ.ರಾಜು, ಹರೀಶ್, ಎಸ್ ಎಲ್. ಕೃಷ್ಣ, ಜಯಕಾoತ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು