ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರದ ಹುತ್ತಾ ಕಾಲೋನಿ ಅನನ್ಯ ಶಾಲೆಯಲ್ಲಿ ಅನನ್ಯ ಹ್ಯಾಪಿ ಪ್ಲೇ ಹೋಮ್, ನರ್ಸರಿ, ಎಲ್.ಕೆ.ಜಿ ಹಾಗೂ ಯು.ಕೆ.ಜಿ ವಿದ್ಯಾರ್ಥಿಗಳಿಗೆ ಛದ್ಮ ವೇಷ (ಅಲಂಕಾರಿಕ ಉಡುಗೆ ಸ್ಪರ್ಧೆ) ಏರ್ಪಡಿಸಲಾಗಿತ್ತು.
ಅನನ್ಯ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಬಿ.ಎಸ್.ಅನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತೀರ್ಪುಗಾರರಾಗಿ ಸುಮ ನಾಗಪ್ರಸಾದ್ ದಿವ್ಯ ತೀರ್ಪು ನೀಡಿದರು. ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿಗಳು ವೇಣುಗೋಪಾಲ್, ಅನನ್ಯ ಹ್ಯಾಪಿ ಹಾರ್ಟ್ಸ್ನ ಮುಖ್ಯ ಶಿಕ್ಷಕಿ ತನುಜ ಅನಿಲ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕಲ್ಲೇಶ್ ಕುಮಾರ್ ಕೆ. ಉಪ ಮುಖ್ಯೋಪಾಧ್ಯಾಯಿನಿ ಸುನಿತಾ ಆರ್ ಉಪಸ್ಥಿತರಿದ್ದರು.
ಎಲ್ಲಾ ವಿದ್ಯಾರ್ಥಿಗಳು ವಿವಿಧ ವೇಷದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದು ಕಾರ್ಯಕ್ರಮಕ್ಕೆ ಮೆರಗು ತಂದಿತ್ತು.
ಶರ್ಮಿಳಾ ಸ್ವಾಗತಿಸಿ,ರೋಹಿಣಿ ವಿ ಮುನಳ್ಳಿ ಕಾರ್ಯಕ್ರಮ ನಿರೂಪಿಸಿದರು. ರಮ್ಯ ವಂದಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: 9743225795