ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸಿ ಹೊರತರಲು ಶಿಕ್ಷಕರಿಗೆ ಅವಕಾಶ

ವಿಜಯ ಸಂಘರ್ಷ ನ್ಯೂಸ್ 
ಕೆ.ಆರ್.ಪೇಟೆ: ಪ್ರತಿಭಾ ಕಾರಂಜಿ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ ರೂಪಿಸಲು ಪೋಷಕರು ಹಾಗೂ ಶಿಕ್ಷಕರನ್ನು ಪ್ರೋತ್ಸಾಹಿಸುತ್ತದೆ ಎಂದು ಎಸ್ಸಿ-ಎಸ್ಟಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಳೆಯೂರು ಯೋಗೇಶ್ ಹೇಳಿದರು.

ತಾಲೂಕಿನ ಬೂಕನಕೆರೆ ಹೋಬಳಿಯ ಕಾಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆವರಣದಲ್ಲಿ ಕ್ಷೇತ್ರ ಶಿಕ್ಷಣ ಕಾರ್ಯ ದಲ್ಲಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದಿಂದ ಸಂಯುಕ್ತ ಆಶ್ರಯದಲ್ಲಿ ನಡೆದ 2025ನೇ ಸಾಲಿನ ಬೂಕನಕೆರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಸರಕಾರದ ಈ ಅದ್ಬುತ ಕಾರ್ಯ ಕ್ರಮವು ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಯನ್ನು ಗುರುತಿಸಿ ಹೊರತರಲು ಶಿಕ್ಷಕರಿಗೆ ಅವಕಾಶವನ್ನು ನೀಡುತ್ತದೆ. 
ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲವನ್ನು ಹೊಂದಲು ಪ್ರತಿಭಾ ಕಾರಂಜಿ ಸಹಕಾರಿಯಾಗಲಿದೆ ಎಂದರು.

 ಶಿಕ್ಷಣ ಕ್ಷೇತ್ರದಲ್ಲಿ ಕಲೆಗಳನ್ನು ಉತ್ತೇಜಿಸುವ ಮೂಲಕ ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ, ಸೃಜನಾತ್ಮಕ ಕೌಶಲ ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಯಾಗಿದೆ. ಶಿಕ್ಷಕರು ತರಗತಿ ವೇಳೆ ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಗಳನ್ನು ಗುರುತಿಸಿ, ಭವಿಷ್ಯದಲ್ಲಿ ಉತ್ತಮ ಪ್ರತಿಭಾನ್ವಿತ ವ್ಯಕ್ತಿಯಾಗಿ ಹೊರ ಹೊಮ್ಮಲು ಸಹಕರಿಸಬೇಕು.

 ತೀರ್ಪುಗಾರರು ಎಲ್ಲಾಮಕ್ಕಳನ್ನು ಸಮಾನವಾಗಿ ಕಾಣುವ ಮೂಲಕ ಪ್ರತಿಭೆ ಇರುವ ಮಕ್ಕಳನ್ನು ತಾಲೂಕು ಮಟ್ಟಕ್ಕೆ ಕಳಿಸಬೇಕೆಂದು ಸಲಹೆ ನೀಡಿದರು.ಈ ಕಾರ್ಯಕ್ರಮದ ಪ್ರಯೋಜನವನ್ನು ಎಲ್ಲಾ ವಿದ್ಯಾರ್ಥಿ ಗಳು ಪಡೆದುಕೊಳ್ಳ ಬೇಕು. ಮಕ್ಕಳು ಅತ್ಯಂತ ಉತ್ಸಾಹದಿಂದ ಕಾರ್ಯ ಕ್ರಮದಲ್ಲಿ ಭಾಗವಹಿಸುತ್ತಿರುವುದು ಖುಷಿತಂದಿದೆ ಕ್ಲಸ್ಟರ್‌ ಮಟ್ಟದಲ್ಲಿ ವಿಜೇತ ರಾದವರು ತಾಲ್ಲೂಕು ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸು ತ್ತಾರೆ.ಅಲ್ಲಿ ಗೆದ್ದವರು ಜಿಲ್ಲಾ ಮತ್ತು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆ ಯನ್ನು ಪ್ರತಿನಿಧಿಸುವ ಅವಕಾಶ ಪಡೆಯುತ್ತಾರೆ. ಆದ್ದರಿಂದ ಯಾವುದೇ ಸ್ಪರ್ಧೆಗಳಲ್ಲಿ ಮಕ್ಕಳ ಪ್ರತಿಭೆಯನ್ನು ನಿಷ್ಪಕ್ಷಪಾತವಾಗಿ ಗುರುತಿಸಿ, ಪ್ರಶಸ್ತಿ ಯನ್ನು ತೀರ್ಮಾನಿಸಲಾಗುತ್ತದೆ ಎಂದರು.

ಬಳಿಕ ಮಾತನಾಡಿದ ಗ್ರಾಮದ ಹಿರಿಯ ಮುಖಂಡ ಬಾಣೇಗೌಡ ಮಕ್ಕಳ ಪ್ರತಿಭೆಯನ್ನು ಬೆಳಕಿಗೆ ತರುವಲ್ಲಿ ತಂದೆ–ತಾಯಿ ಮತ್ತು ಶಿಕ್ಷಕರ ಶ್ರಮವೂ ಇದೆ. ಇಬ್ಬರೂ ಕೈ ಜೋಡಿಸಿದಾಗ ಮಾತ್ರ ಮಕ್ಕಳ ಪ್ರತಿಭೆ ಅನಾವರಣ ಗೊಳ್ಳುತ್ತದೆ. ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರಷ್ಟೇ ಪೋಷಕರ ಪಾತ್ರವೂ ಅತಿ ಮುಖ್ಯವಾಗಿದೆ. ಮಕ್ಕಳನ್ನು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವಂತೆ ಮಾಡಬೆಕು ಎಂದರು.

ಕಾರ್ಯಕ್ರಮಕ ಮುನ್ನ ಗ್ರಾಮದ ಪ್ರಮುಖ ಬೀದಿಯಲ್ಲಿ ಪ್ರತಿಭಾವಂತ ಮಕ್ಕಳ ಹಾಗೂ ಪೂರ್ಣಕುಂಭ ಜೊತೆಗೆ ಕಲಾವೇಶ ಮೆರವಣಿಗೆ *ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಶಿಕ್ಷಕ ಆನಂದ ಕುಮಾರ್* ಚಾಲನೆ ನೀಡಿ ಶಾಲಾ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅದಕ್ಕೊಂದು ವೇದಿಕೆ ಒದಗಿಸುವಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು. 

 ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸತೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

*ಆಕರ್ಷಿಸಿದ ಮಕ್ಕಳ ವೇಷಭೂಷಣ* ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಟ್ಟದ ವಿವಿಧ ಶಾಲೆಯ ಮಕ್ಕಳು ಭಾಗವಹಿಸಿದ್ದರು, ಭೀಮ, ಒನಕೆ ಓಬವ್ವ,ಕಿತ್ತೂರು ರಾಣಿ ಚನ್ನಮ್ಮ, ನವಿಲು, ಪರಿಸರ, ಸೇರಿದಂತೆ ಕಲೆ, ಸಂಸ್ಕೃತಿ ಬಿಂಬಿಸುವ ವೇಷಭೂಷಣ ಗಳು ಆಕರ್ಷಿಸಿದವು. ರಂಗೋಲಿ, ರಸ ಪ್ರಶ್ನೆ, ಗಾಯನ ಸ್ಪರ್ಧೆ, ಪ್ರಬಂಧ, ಚಿತ್ರಕಲೆ ಇತರ ಸ್ಪರ್ಧೆಗಳು ನಡೆದವು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಗಳು ಎಲ್ಲರ ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ಎಂ.ಎಸ್ ಸುರೇಶ್, ಸಿ.ಆರ್.ಪಿ ನಾಗೇಂದ್ರ, ಗ್ರಾ.ಪಂ ಸದಸ್ಯರಾದ ವರದರಾಜು,ಸಾಕಮ್ಮ ಸಿದ್ದರಾಜು,ಶಾಲಾ ಮುಖ್ಯ ಶಿಕ್ಷಕ ಗೋಪಾಲಕೃಷ್ಣ,ಎಸ್.ಡಿ.ಎಂ.ಸಿ ಅಧ್ಯಕ್ಷ ಸತೀಶ್, ಉಪಾಧ್ಯಕ್ಷ ಬಸವರಾಜು, ಸಹ ಶಿಕ್ಷಕ ಅರುಣ್ ಕುಮಾರ್, ಗ್ರಾಮದ ಮುಖಂಡರು ಗಳಾದ ವಿಜಯಕುಮಾರ್ ಜವರೇಗೌಡ ಬಾಣೇಗೌಡ,ಕೃಷ್ಣೇಗೌಡ, ಮಂಜೇಗೌಡ, ಶಂಕರ್,ಗಿರಿಗೌಡ ಕಾಂತರಾಜು,ಜಯರಾಮ,ಶಿಕ್ಷಕ ವೃಂದ, ಗ್ರಾಮಸ್ಥರು,ಅಂಗನವಾಡಿ ಕಾರ್ಯಕರ್ತರು ಇದ್ದರು.

*✍️ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ*

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು