ಸಿಎಂ ಸ್ಥಾನ ಡಿ.ಕೆ. ಶಿವಕುಮಾರ್ ಗೆ ಬಿಟ್ಟುಕೊಡಿ: ಶಶಿಕುಮಾರ್ ಎಸ್.ಗೌಡ ಮನವಿ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಸಿಎಂ ಸಿದ್ದರಾಮಯ್ಯ ರವರು ಇದೀಗ ತಮ್ಮ ಸ್ಥಾನವನ್ನು ಡಿಸಿಎಂ ಡಿ.ಕೆ.ಶಿವಕುಮಾ‌ರ್ ಅವರಿಗೆ ಬಿಟ್ಟು ಕೊಡುವ ಮೂಲಕ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗು ವಂತೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್‌ ಎಸ್.ಗೌಡ ಹೇಳಿಕೆ ಯಲ್ಲಿ ಮನವಿ ಮಾಡಿದ್ದಾರೆ. 

ರಾಜ್ಯ ರಾಜಕಾರಣದಲ್ಲಿ ಅಧಿಕಾರ ಹಂಚಿಕೆ ಮಾತುಗಳು ಕೇಳಿ ಬರುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರುವಲ್ಲಿ ಡಿ.ಕೆ.ಶಿವ ಕುಮಾ‌ರ್ ಅವರ ಪಾತ್ರವೂ ದೊಡ್ಡ ದಾಗಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಹಂತ ಹಂತವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿ ಕೊಂಡು ಕೆಪಿಸಿಸಿ ಅಧ್ಯಕ್ಷ ರಾಗುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿ ದ್ದಾರೆಂದು ಹೇಳಿದರು.

 ಆಡಳಿತದಲ್ಲಿ ಅಧಿಕಾರ ಹಂಚಿಕೆ ಸೂತ್ರ ರೂಪಿಸಕೊಳ್ಳಲಾಗಿದೆ ಎಂಬ ಮಾತುಗಳು ಆರಂಭದಿಂದಲೂ ಕೇಳಿ ಬರುತ್ತಿದ್ದು, 2.5 ವರ್ಷ ಅಧಿಕಾರದ ನಂತರ ಡಿ.ಕೆ. ಶಿವ ಕುಮಾರ್ ಮುಖ್ಯಮಂತ್ರಿ ಯಾಗುತ್ತಾ ರೆಂಬ ಆಶಾಭಾವನೆ ನಾಡಿನ ಸಮಸ್ತ ನಾಗರಿಕರು ಹೊಂದಿದ್ದರು. ಅದರಲ್ಲೂ ಒಕ್ಕಲಿಗ ಸಮುದಾಯದವರು ಹೆಚ್ಚಿನ ಆಶಾಭಾವನೆ ಹೊಂದಿದ್ದರು. ಇದೀಗ ಅಧಿಕಾರ ಹಂಚಿಕೆ ವಿಚಾರದಲ್ಲಿ ತಾವು ಮೀನಾಮೇಷ ಮಾಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಸಾಮಾಜಿಕ ನ್ಯಾಯದ ಹರಿಕಾರರಾದ ತಾವು ತಮ್ಮ ಅಧಿಕಾರ ಬಿಟ್ಟುಕೊಡುವ ಮೂಲಕ ರಾಜ್ಯದಲ್ಲಿ ಮುಂದಿನ ಸುಗಮ ಆಡಳಿತಕ್ಕೆ ಅನುವು ಮಾಡಿಕೊಡುವಂತೆ ಕೋರಿದ್ದಾರೆ.

ರಾಜ್ಯದಲ್ಲಿರುವ ಶೇ.70ರಷ್ಟು ಒಕ್ಕಲಿಗ ಮತದಾರರು ಕಾಂಗ್ರೆಸ್ ಪಕ್ಷ ಬೆಂಬಲಿಸಿದ ಹಿನ್ನೆಲೆಯಲ್ಲಿ 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ತಾವು ಮುಖ್ಯಮಂತ್ರಿ ಯಾಗಲು ಸಾಧ್ಯವಾಯಿತು. ಅಲ್ಲದೆ 2023ರ ಚುನಾವಣೆಯಲ್ಲೂ ಒಕ್ಕಲಿಗರು ಪ್ರಮುಖ ಪಾತ್ರವಹಿಸಿದ್ದು, ಈ ಹಿನ್ನೆಲೆ ಯಲ್ಲಿ ಒಕ್ಕಲಿಗರ ಋಣ ತೀರಿಸಲು ಡಿ.ಕೆ.ಶಿವಕುಮಾರ್ ಅವರಿಗೆ ತಮ್ಮ ಸ್ಥಾನ ಬಿಟ್ಟುಕೊಡುವಂತೆ ಒತ್ತಾಯಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು