ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಮಹಿಳಾ ಅಧ್ಯಕ್ಷೆ ರೂಪ ನಾಗರಾಜರವರು ಸಂಘಟನೆ ಯಲ್ಲಿ ಅಶಿಸ್ತಿನಿಂದ ನಡೆದುಕೊಂಡಿ ದ್ದಾರೆ ಎಂಬ ಕಾರಣದಿಂದ ಅವರ ತೆರವಾದ ಸ್ಥಾನಕ್ಕೆ ನೂತನ ಅಧ್ಯಕ್ಷ ರನ್ನಾಗಿ ಶಕುಂತಲಾ ರವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಲಾಯಿತು.
ಈಚೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎನ್. ನಾರಾಯಣ ಗೌಡ ಮಾರ್ಗದರ್ಶನದಲ್ಲಿ ನಡೆದ ಸಭೆಯ ಅಧ್ಯಕ್ಷತೆ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಹನಾ ವಹಿಸಿದ್ದರು.
ಜಿಲ್ಲಾ ಮಹಿಳಾ ಪದಾಧಿಕಾರಿಗಳ ಹಾಗೂ ತಾಲೂಕು ಅಧ್ಯಕ್ಷರುಗಳ ಸಭೆಯಲ್ಲಿ ನೇಮಕಾತಿ ಆದೇಶ ಪ್ರತಿ ನೀಡಿ ಮಹಿಳಾ ಸಂಘಟನೆಯನ್ನು ಬಲಪಡಿಸುವಲ್ಲಿ ಮುಂದಾಗುವಂತೆ ಆದೇಶ ಪ್ರತಿಯಲ್ಲಿ ತಿಳಿಸಲಾಯಿತು.
ಸಭೆಯಲ್ಲಿ ರಾಜ್ಯ ಪದಾಧಿಕಾರಿಗಳಾದ ಹಯಾತ್, ಮಹಿಳಾ ಉಪಾಧ್ಯಕ್ಷರಾದ ಸಂಗೀತ ಶೆಟ್ಟಿ, ಶಿವಮೊಗ್ಗ ಜಿಲ್ಲಾಧ್ಯಕ್ಷೆ ಡಾ.ಜ್ಯೋತಿ ಸೋಮಶೇಖರ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.