ಕನಕದಾಸರ ಆದರ್ಶಗಳನ್ನು ಅಳವಡಿಸಿ ಕೊಂಡಾಗ ಜೀವನ ಸಾರ್ಥಕ: ಬಿ.ಕೆ. ಸಂಗಮೇಶ್ವರ್

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ : ಕನಕದಾಸರ ಆದರ್ಶ ಗಳನ್ನು ಪ್ರತಿಯೊಬ್ಬರು ಅಳವಡಿಸಿ ಕೊಂಡಾಗ ಮಾತ್ರ ಜೀವನ ಸಾರ್ಥಕ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.

ಶನಿವಾರ ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಯಿಂದ ತಾಲೂಕು ಪಂಚಾಯಿತಿ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನಕದಾಸರ ಬದುಕು ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾಗಬೇಕು. ಅವರ ಆದರ್ಶನಗಳು ನಮ್ಮ ಜೀವನಕ್ಕೆ ದಾರಿದೀಪವಾಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಮುನ್ನಡೆಯಬೇಕೆಂದರು.

ಸಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕ ಎಸ್.ವಿ ಶಶಿಕುಮಾರ್ ಉಪನ್ಯಾಸ ನೀಡಿದರು.
 
ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್, ಉಪಾಧ್ಯಕ್ಷ ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಕೆ.ಎನ್ ಹೇಮಂತ್,  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ತಹಸೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಸದಸ್ಯರಾದ ಮಂಜುಳಾ ಸುಬ್ಬಣ್ಣ, ಅನಿತಾ ಮಲ್ಲೇಶ್, ಕಾಂತರಾಜ್, ಕೆ. ಸುದೀಪ್ ಕುಮಾ‌ರ್, ಹನುಮಂತಪ್ಪ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್. ಗಣೇಶ್, ಸಮಾಜದ ಪ್ರಮುಖರಾದ ಹಾ.ರಾಮಪ್ಪ, ಕರಿಯಪ್ಪ, ಗ್ಯಾಮಣ್ಣ, ಹೇಮಾವತಿ ಶಿವಾನಂದ್, ಉಮೇಶ್, ಕೇಸರಿಪಡೆ ಗಿರೀಶ್, ಮಹಾದೇವಣ್ಣ, ಎಸ್. ಮಂಜುನಾಥ್, ಮಾಲಾ ಗೌಡ ಇನ್ನಿತರರಿದ್ದರು.

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ ನಿರೂಪಿಸಿ, ಅಭಿಲಾಷ್ ಸ್ವಾಗತಿಸಿದರು. ಬಿಇಓ ಎ.ಕೆ. ನಾಗೇಂದ್ರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಮಾಜದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮಕ್ಕೂ ಮೊದಲು ನಗರದ ಲೋಯ‌ರ್ ಹುತ್ತಾದಿಂದ ಶ್ರೀ ಕನಕದಾಸರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು