ಭದ್ರಾವತಿ-ಕನ್ನಡ ನಾಡಿನ ನೆಲ-ಜಲ-ಭಾಷೆಯು ನಿತ್ಯೋತ್ಸವವಾಗಬೇಕು

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಕನ್ನಡ ನಾಡಿನ ನೆಲ-ಜಲ- ಭಾಷೆಯ ಮೇಲಿನ ಪ್ರೀತಿ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಕವಿ ಆಶಯ ದಂತೆ ಅದು ನಿತ್ಯೋತ್ಸ ವವಾಗಬೇಕು. ಈ ನಿಟ್ಟಿನಲ್ಲಿ ಕನ್ನಡಿ ಗರಾದ ನಾವುಗಳು ಮುನ್ನಡೆಯ ಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.

ಅವರು ಶನಿವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಹಳೇ ನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸ ಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ನಾಡ ಧ್ವಜಾ ರೋಹಣ ನೆರವೇರಿಸಿ ಮಾತನಾಡಿದರು.

ನಮ್ಮ ಆಚರಣೆಗಳು ಕೇವಲ ಮೇಲ್ನೋಟಕ್ಕೆ ಸೀಮಿತವಾಗದೆ, ನೆಲ-ಜಲ-ಭಾಷೆ ಮೇಲಿನ ಪ್ರೀತಿ ನಿರಂತರ ವಾಗಿರಬೇಕು.ನಮ್ಮ ನಾಡಿಗಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸುವ ಮೂಲಕ ಅವರ ದಾರಿಯಲ್ಲಿ ನಾವುಗಳು ಸಹ ಸಾಗಬೇಕು. ಆಗ ಮಾತ್ರ ಕನ್ನಡ ನೆಲ-ಜಲ-ಭಾಷೆ ಉಳಿಸಿಕೊಳ್ಳಲು ಸಾಧ್ಯ ಎಂದರು.

ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಎನ್.ಕೆ ಹೇಮಂತ್, ತಹಸೀಲ್ದಾರ್ ಪರುಸಪ್ಪ ಕುರುಬರ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆ.ತಿಮ್ಮಪ್ಪ, ಬಿಇಓ ಎ.ಕೆ ನಾಗೇಂದ್ರಪ್ಪ, ವಿವಿಧ ಕ್ಷೇತ್ರಗಳ ಸಾಧಕರಾದ ಡಾ.ಕೃಷ್ಣ ಎಸ್. ಭಟ್, ಡಾ.ಡಿ. ನಾಗರಾಜ್ ಸೇರಿದಂತೆ ನಗರಸಭೆ ಚುನಾಯಿತ ಹಾಗು ನಾಮನಿರ್ದೇಶಿತ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯ ರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಿಂದ ಕನಕಮಂಟಪ ಮೈದಾನದವರೆಗೂ ತಾಯಿ ಭುವನೇಶ್ವರಿ ಭಾವಚಿತ್ರ ದೊಂದಿಗೆ ಮೆರವಣಿಗೆ ನಡೆಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು