ಸರ್ಕಾರಿ ಶಾಲೆ ಮಕ್ಕಳ ವಿದ್ಯಾಭ್ಯಾಸಕ್ಕೆ ಉಳ್ಳವರು ನೆರವಾಗಿ: ಮಂಜುನಾಥ್

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಸರ್ಕಾರಿ ಶಾಲೆ ಮಕ್ಕಳು ಆರ್ಥಿಕ ವಾಗಿ ಬಡವರಾಗಿದ್ದು,ಅವರ ವಿದ್ಯಾಭ್ಯಾಸಕ್ಕೆ ಉಳ್ಳವರು ನೆರವಾಗುವ ಮೂಲಕ ಭವಿಷ್ಯ ದಲ್ಲಿ ಆ ಮಕ್ಕಳು ಉತ್ತಮ ಸಾಧನೆ ಯೊಂದಿಗೆ ತಾವು ಓದಿರುವ ಶಾಲೆಗಳ ಬೆಳವಣಿಗೆಗೆ ಕೈಜೋಡಿಸುವಂತಾಗ ಬೇಕು ಎಂದು ದಲಿತ ನೌಕರ ಸಂಘದ ಮುಖಂಡ ಮಂಜುನಾಥ್ ಹೇಳಿದರು.

ಅವರು ಶನಿವಾರ ನಗರದ ತರೀಕೆರೆ ರಸ್ತೆಯ ಉರ್ದು, ತಮಿಳು, ಆಂಗ್ಲ ಹಾಗು ಕನ್ನಡ ಮಾಧ್ಯಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕರ್ನಾಟಕ ದಲಿತ ಸಮನ್ವಯ ಸಮಿತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಉಚಿತ ನೋಟ್ ಬುಕ್ ಹಾಗು ಲೇಖನ ಸಾಮಾಗ್ರಿಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಆಶಯದಂತೆ ಪ್ರತಿಯೊಬ್ಬರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಅದರಲ್ಲೂ ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಗಮನ ನೀಡಬೇಕಿದೆ. ಇಂತಹ ಕಾರ್ಯಕ್ರಮಗಳು ಭವಿಷ್ಯ ದಲ್ಲಿ ಮಕ್ಕಳ ಮನಸ್ಸಿನ ಮೇಲೆ ಹೆಚ್ಚು ಪರಿಣಾಮವನ್ನುಂಟು ಮಾಡಲಿವೆ. ಆಗ ಮಾತ್ರ ಸರ್ಕಾರಿ ಶಾಲೆ ಮಕ್ಕಳಿಗೆ ವಿವಿಧ ಸಂಘ-ಸಂಸ್ಥೆಗಳ ನೆರವು ಸಾರ್ಥಕ ವಾಗುತ್ತದೆ ಎಂದರು.

ದಲಿತ ಸಮನ್ವಯ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ವಿ.ವಿನೋದ್ ಮಾತನಾಡಿ, ಸರ್ಕಾರಿ ಶಾಲೆಗಳ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿ ಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮ ಗಳನ್ನು ರೂಪಿಸಿಕೊಂಡು ಬರಲಾಗು ತ್ತಿದೆ. ನೋಟ್ ಬುಕ್ ಹಾಗು ಲೇಖನ ಸಾಮಾಗ್ರಿ ಗಳ ವಿತರಣೆ ಸಹ ಒಂದಾಗಿದೆ. ಬಡ ಮಕ್ಕಳ ಶಿಕ್ಷಣಕ್ಕೆ ಸಮಿತಿ ನೆರವಾಗುತ್ತಿರುವುದು ಸಂತಸದ ಸಂಗತಿ ಯಾಗಿದೆ. ಈ ಕಾರ್ಯಕ್ಕೆ ನೆರವಾಗುತ್ತಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯ ವ್ಯಕ್ತಿ(ಸಿಆರ್‌ಪಿ) ಸಿ.ಚನ್ನಪ್ಪ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಯು.ಮಹಾದೇವಪ್ಪ, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಎಂ.ಆರ್‌ ರೇವಣಪ್ಪ ಸೇರಿದಂತೆ ಇನ್ನಿತರರು ಮಾತನಾಡಿದರು.

ಪ್ರಮುಖರಾದ ಶಿಕ್ಷಕ ನರಸಿಂಹ ಮೂರ್ತಿ, ದಲಿತ ಸಮನ್ವಯ ಸಮಿತಿ ಉಪಾಧ್ಯಕ್ಷ ಸುರೇಶ್, ಸಂಘಟನಾ ಕಾರ್ಯದರ್ಶಿ ನೇತ್ರಾವತಿ, ಮೋಹನ್, ರಾಜ್ಯ ಸಂಘಟನಾ ಕಾರ್ಯದರ್ಶಿ ಗೋವಿಂದಪ್ಪ, ಜಗದೀಶ್, ರಾಜು, ಹುಸೇನ್, ಸುಬ್ರಮಣ್ಯ ಹಾಗು 4 ಶಾಲೆ ಗಳ ಮುಖ್ಯ ಶಿಕ್ಷಕರು, ಶಿಕ್ಷಕ ಹಾಗು ಸಿಬ್ಬಂದಿ ವರ್ಗದ ಇನ್ನಿತರರು ಉಪಸ್ಥಿತರಿದ್ದರು.ಮುಖ್ಯಶಿಕ್ಷಕ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು