ಭದ್ರಾವತಿ-ಕರವೇ ಮಹಿಳಾ ಪದಾಧಿಕಾರಿಗಳ ಪದಗ್ರಹಣ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಮಹಿಳಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನೆರವೇರಿತು.  

ಗುರುವಾರ ಖಾಸಗಿ ಹೋಟೆಲ್ ನಲ್ಲಿ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಉಪಾಧ್ಯಕ್ಷರಾಗಿ ಶಶಿಕಲಾ, ಪ್ರಧಾನ ಕಾರ್ಯದರ್ಶಿಯಾಗಿ ಅನುಷಾ, ಕಾರ್ಯದರ್ಶಿಯಾಗಿ ನೇತ್ರಾವತಿ ಸಂಘಟನಾ ಕಾರ್ಯದರ್ಶಿ ಯಾಗಿ ಪಾರ್ವತಿ ಅವರಿಗೆ ಆದೇಶ ಪತ್ರ ನೀಡಿ ಆಯ್ಕೆ ಮಾಡಲಾಯಿತು.

ತಾಲೂಕು ಮಹಿಳಾ ಅಧ್ಯಕ್ಷೆ ಶಕುಂತಲಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಹಿಳಾ ಅಧ್ಯಕ್ಷೆ ಡಾ:ಜ್ಯೋತಿ ಸೋಮಶೇಖರ್, ಶಿವಮೊಗ್ಗ ತಾಲೂಕ ಅಧ್ಯಕ್ಷ ಪ್ರಶಾಂತ್, ಸಾಗರ ತಾಲೂಕ ಅಧ್ಯಕ್ಷ ಮನೋಜ್ ಕುಗ್ವೆ, ಭದ್ರಾವತಿ ತಾಲೂಕು ಉಪಾಧ್ಯಕ್ಷ ಯೋಗೇಶ್, ಶಿವಮೊಗ್ಗ ಮಹಿಳಾ ತಾಲೂಕು ಅಧ್ಯಕ್ಷೆ ಜಾನವಿ,ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಶಾರದಾ, ಕರವೇ ಮುಖಂಡ ಮಂಜುನಾಥ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು