ಶಿವಮೊಗ್ಗ-ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಸೂಸೈಡ್

ವಿಜಯ ಸಂಘರ್ಷ ನ್ಯೂಸ್ 
ಶಿವಮೊಗ್ಗ: ನಗರದ ಖಾಸಗಿ ಕಾಲೇಜಿನಲ್ಲಿ ತೃತೀಯ ಬಿ.ಎಸ್ಸಿ. ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಯೊಬ್ಬಳು, ವಾಸವಿದ್ದ ಹಾಸ್ಟೆಲ್‌ನ ಟೆರೇಸ್‌ನಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.

ಭದ್ರಾವತಿ ತಾಲೂಕಿನ ದೊಡ್ಡೇರಿ ಗಂಗೂರು ಗ್ರಾಮದ ವನಿಷಾ.ಟಿ.ಸಿ.(21) ಮೃತ ದುರ್ದೈವಿ.

ವನಿಷಾ ಇಲ್ಲಿನ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೆಲ್'ನಲ್ಲಿ ವಾಸವಾಗಿದ್ದಳು. ಬೆಳಿಗ್ಗೆ ತಿಂಡಿ ಸೇವಿಸಿದ ವನಿಷಾ, ಹೊಟ್ಟೆ ನೋವಿನ ಕಾರಣ ನೀಡಿ ಕಾಲೇಜಿಗೆ ಹೋಗುವುದಿಲ್ಲ ಎಂದು ವಾರ್ಡನ್'ಗೆ ತಿಳಿಸಿದ್ದರು. ನಂತರ ಬೆಳಿಗ್ಗೆ ಸುಮಾರು 10 ಗಂಟೆ ಸುಮಾರಿಗೆ ಹಾಸ್ಟೆಲ್‌ನ ಟೆರೇಸ್ ಮೇಲೆ ತೆರಳಿದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ವಿದ್ಯಾರ್ಥಿ ನಿಯವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು