ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 21 ವರ್ಷದ ಯುವಕ ಲೈಂಗಿಕ ದೌರ್ಜನ್ಯ ನಡೆಸಿ ರುವ ಆರೋಪ ನ್ಯಾಯಾಲಯ ದಲ್ಲಿ ಸಾಬೀತಾದ ಹಿನ್ನಲೆಯಲ್ಲಿ ಶಿವಮೊಗ್ಗ ಘನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC-1 ಆರೋಪಿಗೆ 30 ವರ್ಷ ಕಠಿಣ ಶಿಕ್ಷೆ ಮತ್ತು ದoಡ ವಿಧಿಸಿ ತೀರ್ಪು ನೀಡಿದೆ.
2023ನೇ ಸಾಲಿನಲ್ಲಿ, 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 21 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನು ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
ತನಿಖಾಧಿಕಾರಿಗಳಾದ ನಗರ ವೃತ್ತ ನೀರಿಕ್ಷಕ ಶ್ರೀಶೈಲ ಕುಮಾರ ಜೆ. ರವರು ಸದರಿ ಪ್ರಕರಣದ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.
ಸರ್ಕಾರದ ಪರವಾಗಿ ಶ್ರೀಧರ್ ಸರ್ಕಾರಿ ಅಭೀಯೋಜಕರವರು ವಾದ ಮಂಡಿಸಿರುತ್ತಾರೆ. ಘನ ನ್ಯಾಯಾಲಯ ದಲ್ಲಿ ಆರೋಪಿತನ ವಿರುದ್ಧ ಆರೋಪವು ಧೃಡಪಟ್ಟ ಹಿನ್ನೆಲೆಯಲ್ಲಿ ಘನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC-1 ಶಿವಮೊಗ್ಗ ನ್ಯಾಯಾಲಯದ ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ರವರು ಆರೋಪಿತನಿಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1,85,000/- ರೂ ದಂಡ ವಿಧಿಸಿ ಆದೇಶಿಸಿರುತ್ತಾರೆ.