ಭದ್ರಾವತಿ-ಶಿಕ್ಷಕರ ಕೊರತೆ ನೀಗಿಸಲು ಆಗ್ರಹಿಸಿ ಏಕಾಂಗಿ ಪ್ರತಿಭಟನೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲ್ಲೂಕಿನ ಹಿರಿಯೂರು ಗ್ರಾಮದ ಎಸ್.ಬಿ.ಎಂ.ಎಂ.ಆರ್ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಕೊರತೆ ನೀಗಿಸುವಂತೆ ಆಗ್ರಹಿಸಿ ಬುಧವಾರ ಕರ್ನಾಟಕ ಕ್ರಾಂತಿ ರಂಗದ ರಾಜ್ಯ ಉಪಾಧ್ಯಕ್ಷ ಜಿ. ಮಂಜುನಾಥ್ ಏಕಾಂಗಿ ಪ್ರತಿಭಟನೆ ನಡೆಸಿದರು.

ಶಾಲೆಯಲ್ಲಿ ಹಲವಾರು ತಿಂಗಳು ಗಳಿಂದ ಹಿಂದಿ ಶಿಕ್ಷಕರ ಕೊರತೆಯಿಂದ ಮಕ್ಕಳಿಗೆ ಶೈಕ್ಷಣಿಕ ಕೊರತೆ ಎದ್ದು ಕಾಣುತ್ತಿದೆ. ಈ ಬಗ್ಗೆ ಆಡಳಿತ ಮಂಡಳಿ ಗಮನ ಹರಿಸದೇ ಇರುವುದು ಖಂಡನೀಯ. ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿದ್ದು ಕೂಡಲೇ ಸಮಸ್ಯೆ ಬಗೆಹರಿಸಲು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿ ಕಾರಿ ಎ.ಕೆ.ನಾಗೇಂದ್ರಪ್ಪ ಭೇಟಿ ನೀಡಿ ಶಾಲಾ ಆಡಳಿತ ಮಂಡಳಿಗೆ ಮೌಕಿಕ ಎಚ್ಚರಿಕೆ ನೀಡಿ ನಂತರ ಶಿಕ್ಷಕರ ಕೊರತೆ ನೀಗಿಸುವ ಭರವಸೆ ನೀಡಿದ ಹಿನ್ನಲೆ ಯಲ್ಲಿ ಹೋರಾಟವನ್ನು ತಾತ್ಕಾಲಿಕ ವಾಗಿ ಹಿಂಪಡೆಯಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು