ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರದ ಜೆಪಿಎಸ್ ಕಾಲೋನಿ ಯಿಂದ ಸರ್ ಎಂ ವಿ ಕಾಲೇಜಿಗೆ ಹೋಗುವ ಮಾರ್ಗದಲ್ಲಿ ವಿದ್ಯುತ್ ದೀಪ ಇಲ್ಲದೆ ವಿದ್ಯಾರ್ಥಿ ಗಳಿಗೆ ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗಿದ್ದು, ಕೂಡಲೇ ದುರಸ್ಥಿ ಪಡಿಸಿ ಬೀದಿ ದೀಪ ಅಳವಡಿಸುವಂತೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್ ಗೌಡ ಒತ್ತಾಯಿಸಿದರು.
ಸೋಮವಾರ ಮೆಸ್ಕಾಂ ಕಾರ್ಯ ಪಾಲಕ ಇಂಜಿನಿಯರ್ ರವರಿಗೆ ಮನವಿ ಅರ್ಪಿಸಿ ಮಾತನಾಡಿದ ಅವರು, ಈ ರಸ್ತೆಯಲ್ಲಿ ಓಡಾಡುವ ಸಾವಿರಾರು ವಿದ್ಯಾರ್ಥಿಗಳು ಭಯದಲ್ಲಿ ಸಂಚಾರಿಸುವಂತಾಗಿದೆ. ದೀಪದ ಕೆಳಗೆ ಕತ್ತಲು ಎಂಬಂತೆ ಈ ರಸ್ತೆಯಲ್ಲಿ ಸಂಜೆ ಯೇ ಕತ್ತಲು ಆವರಿಸಿ ಸಾರ್ವಜನಿಕರು ಭಯದ ವಾತಾವರಣದಲ್ಲಿ ಸಂಚರಿಸ ಬೇಕಿದೆ ಎಂದರು.
ಇಲ್ಲಿನ ಎಂಯುಎಸ್ಎಸ್ ನಿಂದ ಭದ್ರಾವತಿ ವಿಧಾನಸಭಾ ಕ್ಷೇತ್ರಕ್ಕೆ ವಿದ್ಯುತ್ ಸರಬರಾಜು ಆಗುತ್ತಿದ್ದು, ವಿತರಣಾ ಕೇಂದ್ರದ ಸಮೀಪದಲ್ಲಿ ವಿದ್ಯುತ್ ದೀಪ ಇಲ್ಲದಿರುವುದು ದುರಂತ ಎಂದಿದ್ದಾರೆ.
ಕೂಡಲೇ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ ಬೀದಿ ದೀಪ ಅಳವಡಿಸಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.