ಭದ್ರಾವತಿ-ಜೋಡಿ ಕೊಲೆ: ಐವ್ವರು ಅರೆಸ್ಟ್ ಆಗಲು ಕಾರಣ ಏನು..?

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಪ್ರೇಮಿಗಳಿಬ್ಬರು ಮನೆ ಬಿಟ್ಟು ಓಡಿ ಹೋಗಲು ಸಹಕರಿಸಿದ್ದಾರೆ ಎಂದು ತಪ್ಪು ಕಲ್ಪನೆಯಿಂದ ಇಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಹಳೇನಗರ ಜೈ ಭೀಮ್ ನಗರದ ಕಿರಣ್(25) ಹಾಗೂ ಪೌರ ಕಾರ್ಮಿಕ ಮಂಜುನಾಥ್(45) ಕೊಲೆಯಾದ ದುರ್ದೈವಿಗಳು.

ಘಟನೆ ಕುರಿತು ಸಂಜಯ್, ಶಶಿ, ವೆಂಕಟೇಶ್, ಭರತ್ ಹಾಗೂ ಸುರೇಶ್ ಸೇರಿ ಐವರನ್ನು ಬಂಧಿಸಿರುವುದಾಗಿ ಎಸ್​ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೈಭೀಮ್ ನಗರದ ಪ್ರೇಮಿ ಗಳಿಬ್ಬರು ಮನೆಯಿಂದ ನಾಪತ್ತೆಯಾಗಿ ದ್ದರ ಸಂಬಂಧ ಪ್ರೇಮಿಗಳ ಪೋಷಕರು ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

 ಕಳೆದ ಎರಡು ದಿನಗಳ ಹಿಂದೆ ನಂದೀಶ್ ಮತ್ತು ಸೃಷ್ಟಿ ಎಂಬ ಪ್ರೇಮಿ ಗಳು ಮನೆ ಬಿಟ್ಟು ಹೋಗಿದ್ದರು. ಸಂಜೆ ಅವರು ಹಳೆನಗರ ಪೊಲೀಸ್ ಠಾಣೆಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ.

ಆಗ ಜೈ ಭೀಮ್ ನಗರದ ಕಿರಣ್, ಮಂಜುನಾಥ್ ಸೇರಿ ಹಲವರು ಪೊಲೀಸ್ ಠಾಣೆಗೆ ಬಂದು ಪ್ರೇಮಿಗಳಿಬ್ಬರ ಬಳಿ ಮಾತನಾಡು ವಾಗ ಹುಡುಗಿಯ ಸಹೋದರ ಬಂದು ನನ್ನ ತಂಗಿಯ ಪ್ರೇಮಕ್ಕೆ ನೀವೆಲ್ಲಾ ಬೆಂಬಲ ನೀಡಿದ್ದೀರಿ ಎಂದು ಗಲಾಟೆ ಮಾಡಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಹುಡುಗಿಯ ಸಹೋದರ, ರಾತ್ರಿ ಕಿರಣ್, ಮಂಜುನಾಥ್ ಮನೆಯ ಬಳಿ ಬಂದು ಜಗಳ ತೆಗೆದಿದ್ದಾನೆ.

ಈ ವೇಳೆ ಜಗಳ ವಿಕೋಪಕ್ಕೆ ಹೋಗಿದ್ದು, ನನ್ನ ತಂಗಿ ಓಡಿ ಹೋಗಲು ನೀವೇ ಕಾರಣ ಎಂದು ತಂದಿದ್ದ ಚಾಕುವಿನಿಂದ ಕಿರಣ್ ಹಾಗೂ ಮಂಜುನಾಥನಿಗೆ ಇರಿದು ಸ್ಥಳದಿಂದ ಪರಾರಿಯಾಗಿದ್ಧಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಪೌರ ಕಾರ್ಮಿಕ ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟರೆ, ಕಿರಣ್ ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ.

ಪ್ರಕರಣ ಸಂಬಂಧ ಹಳೇನಗರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು, ಐವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರಿದ್ದು, ಅವರನ್ನು ಬಂಧಿಸುವಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು