ವಿಜಯ ಸಂಘರ್ಷ ನ್ಯೂಸ್
ಶಿವಮೊಗ್ಗ: ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಇವರು ಡಿ.19 ಮತ್ತು 20 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.
ಡಿ.19 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿoದ ಹೊರಟು ರಾತ್ರಿ 9 ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.
ಡಿ.20 ರ ಬೆಳಿಗ್ಗೆ 11 ಕ್ಕೆ ಜಿ.ಪಂ ಸಭಾಂಗಣ/ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತರಬೇತಿ ಕಾರ್ಯಾಗಾರ ದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.30 ಕ್ಕೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡು ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದಿಂದ ನಿರ್ಗಮಿಸುವರು ಎಂದು ರಾಜ್ಯ ಮಾಹಿತಿ ಆಯುಕ್ತರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.