ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ : ನಗರಸಭೆ ವ್ಯಾಪ್ತಿಯ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಶ್ರೀ ಕ್ಷೇತ್ರ ಶ್ರೀ ಶ್ರೀನಿವಾಸಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು. 
ದೇವಸ್ಥಾನದ ಪ್ರಧಾನ ಅರ್ಚಕ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ, ವಿಶೇಷ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು.  

ಬೆಳಿಗ್ಗೆ 5 ಗಂಟೆಯಿಂದ ವೈಕುಂಠನಾಥನ ವಿಶೇಷ ದರ್ಶನ ಅವಕಾಶ ಕಲ್ಪಿಸಲಾಗಿತ್ತು. ಬೆಳಿಗ್ಗೆಯಿಂದಲೇ ಸಹಸ್ರಾರು ಭಕ್ತರು ಸಾಲುಗಟ್ಟಿ ನಿಂತು ಸ್ವಾಮಿಯ ದರ್ಶನ ಪಡೆದರು. ಸಂಜೆ 6.30 ರಿಂದ ಸರಸ್ವತಿ ಕಲಾ ಸಂಗೀತ ಮತ್ತು ನೃತ್ಯ ಶಾಲೆ ವತಿಯಿಂದ ಸಂಗೀತ ಮತ್ತು ಭರತನಾಟ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು