ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರದ ಬೊಮ್ಮನಕಟ್ಟೆ ಯಲ್ಲಿ ಮನೆಯೊಂದರ ಹುಲ್ಲಿನ ಬಣವೆಯೊಂದ ರಲ್ಲಿ ಗಾಂಜಾ ಬಚ್ಚಿಟ್ಟಿದ್ದ ಪ್ರಕರಣ ವೊಂದನ್ನು, ಪೇಪರ್ ಟೌನ್ ಠಾಣೆ ಪೊಲೀಸರು ಪತ್ತೆ ಹಚ್ಚಿದ ಘಟನೆ ನಡೆದಿದೆ.
ಖಚಿತ ವರ್ತಮಾನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಗಾಂಜಾ ಬಚ್ಚಿಟ್ಟಿದ್ದ ಆರೋಪದ ಮೇರೆಗೆ, ಅಬ್ದುಲ್ ಖದ್ದೂಸ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.
ಒಟ್ಟಾರೆ 8 ಕೆಜಿ 60 ಗ್ರಾಂ ತೂಕದ 4,03,000 ರೂ. ಮೌಲ್ಯದ ಗಾಂಜಾ ವನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.
ಈ ಸಂಬಂಧ ಆರೋಪಿ ವಿರುದ್ದ ಪೇಪರ್ ಟೌನ್ ಪೊಲೀಸ್ ಠಾಣೆ ಯಲ್ಲಿ ಆರೋಪಿ ವಿರುದ್ದ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಕೇಸ್ ದಾಖಲಾಗಿದೆ.