ಭದ್ರಾವತಿ-ಯುವತಿ ನಾಪತ್ತೆ : ಸುಳಿವು ಪತ್ತೆಗೆ ಮನವಿ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಅಲ್ಮಾಸ್ ಪರ್ವೀನ್ ಎನ್ ಆರ್, (25) ಈಕೆಯು ಭದ್ರಾವತಿಯ ಸೀಗೆಬಾಗಿಯಲ್ಲಿರುವ ರಾಜೀವ್‌ ಗಾಂಧಿ ಬಿ.ಎಡ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಜ.06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಮನೆಯಿಂದ ಹೋದ ವಳು ಹಿಂದುರುಗಿ ಬಂದಿರುವುದಿಲ್ಲ. 

ಕಾಣೆಯಾದ ಅಲ್ಮಾಸ್ ಪರ್ವೀನ್ 5.4 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಉರ್ದು, ಹಿಂದಿ, ಕನ್ನಡ, ಇಂಗ್ಲೀಷ್ ಭಾಷೆ ಮಾತಾನಾಡುತ್ತಾಳೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಟಾಪ್, ಪಿಂಕ್ ಬಣ್ಣದ ಲೆಗಿನ್ಸ್ ಪ್ಯಾಂಟು, ಬಿಳಿ ಗೆರೆಗಳಿರುವ ಕಪ್ಪು ಬಣ್ಣದ ಬುರ್ಖಾ, ಕಾಫಿ ಬಣ್ಣದ ವೇಲ್ ಧರಿಸಿರುತ್ತಾಳೆ.

ಈಕೆಯ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಹಳೇನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು