ವಿಜಯ ಸಂಘರ್ಷ ನ್ಯೂಸ್
ಶಿವಮೊಗ್ಗ: ನಗರದ ಏಕೈಕ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ನಿವೇಶನ ಹಾಗೂ ಸ್ವಂತ ಕಟ್ಟಡ ಮಂಜೂರು ಮಾಡುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ ರಮೇಶ್ ಶಂಕರಘಟ್ಟ ಮನವಿ ಮಾಡಿದ್ದಾರೆ.
ಅವರು ಶನಿವಾರ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ವಿದ್ಯಾರ್ಥಿನಿಯರಿಗೆ ಉತ್ತಮ ಶಿಕ್ಷಣ ನೀಡುತ್ತಾ ಬರುತ್ತಿರುವ ಪ್ರತಿಷ್ಠಿತ ಕಾಲೇಜಾಗಿದ್ದು, ಸುಮಾರು 250 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿ ದ್ದಾರೆ. ವ್ಯಾಸಂಗಕ್ಕಾಗಿ ಪ್ರತಿವರ್ಷ ಸಾವಿರಾರು ವಿದ್ಯಾರ್ಥಿ ನಿಯರು ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ ಸ್ಥಳಾವಕಾಶದ ಕೊರತೆ ಹಿನ್ನಲೆಯಲ್ಲಿ ಅನೇಕ ವಿದ್ಯಾರ್ಥಿನಿಯರು ಪ್ರವೇಶಾ ವಕಾಶದಿಂದ ವಂಚಿತ ರಾಗುತ್ತಿದ್ದಾರೆ ಎಂದು ರಮೇಶ್ ಮನವಿಯಲ್ಲಿ ತಿಳಿಸಿದ್ದಾರೆ.
2014ರಿಂದ ಕರ್ನಾಟಕ ಸಂಘದ ಪಕ್ಕದ ಶಾಲಾ ಕಟ್ಟಡದಲ್ಲಿ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ತರಗತಿಗಳು ನಡೆಯುತ್ತಿದ್ದು, ಕಾಲೇಜು ಸಾಕಷ್ಟು ಸ್ಥಳಾವಕಾಶದ ಕೊರತೆ ಅನುಭವಿಸುತ್ತಿದೆ. ಅದೇ ಆವರಣದಲ್ಲಿ ಮಹಿಳಾ ಪಿಯು ಕಾಲೇಜು, ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳು ಇರುವುದರಿಂದ, ಒಮ್ಮೆ 1ನೇ ತರಗತಿ ಪ್ರವೇಶ ಪಡೆದ ಹೆಣ್ಣು ಮಗಳು ಪದವಿಯನ್ನು ಪಡೆದು ಹೊರಬರಲು ಅವಕಾಶವಿದೆ. ಆದ್ದರಿಂದ ಈಗ ಕಾಲೇಜು ನಡೆಯುತ್ತಿರುವ ಆವರಣ ದಲ್ಲಿಯೇ ಕಾಲೇಜಿಗೆ ನಿವೇಶನ ಹಾಗೂ ಕಟ್ಟಡವನ್ನು ಒದಗಿಸಿ ಕೊಡಬೇಕಾಗಿ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕಿಸ್ ಬಾನು,ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್ ಪ್ರಸನ್ನ ಕುಮಾರ್, ಕಾಂಗ್ರೆಸ್ ಪಕ್ಷದ ಪ್ರಮುಖ ರಾದ ಕಲಗೋಡು ರತ್ನಾಕರ್, ದೇವಿ ಕುಮಾರ್ ವಿಜಯಕುಮಾರ್, ಯು ಶಿವಾನಂದ ಜಿ.ಡಿ.ಮಂಜುನಾಥ್ ಉಪಸ್ಥಿತರಿದ್ದರು.