ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ: ಆರೋಪಿ ಜೈಲುಪಾಲು

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಪತ್ನಿಯನ್ನ ಪತಿಯೇ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಕಟ್ಟೆ ಪಂಡರ ಹಳ್ಳಿ ಕ್ಯಾಂಪ್ ಗ್ರಾಮದಲ್ಲಿ ನಡೆದಿದೆ.

ಚಂದನ ಬಾಯಿ(23) ಮಹಿಳೆಯನ್ನ ಪತಿ ಗೋಪಿ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಕೊಲೆಯ ಹಿಂದೆ ಪತಿ ಗೋಪಿಗೆ ಅಕ್ರಮ ಸಂಬಂಧದ ವಾಸನೆ ಹೊಡೆದಿದೆ. ಅಕ್ರಮ ಸಂಬಂಧದ ಬಗ್ಗೆ ಪತ್ನಿ ಚಂದನ ಬಾಯಿ ಅನುಮಾನವಿದ್ದ ಕಾರಣ ಪತಿಯನ್ನ ಪ್ರಶ್ನಿಸುತ್ತಿದ್ದಳು. ಇದರಿಂದ ರೊಚ್ಚಿಗೆದ್ದ ಗೋಪಿ ಭಾನುವಾರ ಕುಡಗೋಲಿನಿಂದ ಹೊಡೆದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. 

ಬೊಮ್ಮನ ಕಟ್ಟೆ ಪಂಡರಹಳ್ಳಿ ಕ್ಯಾಂಪ್ ಗೆ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಭೇಟಿ ನೀಡಿದ್ದಾರೆ, ಮಹಿಳೆ ಕೊಲೆ ಬಗ್ಗೆ ಹೊಳೆಹೊನ್ನೂರು ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾಗಿದೆ.

 ಆರೋಪಿಯನ್ನ ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು