ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 2 ರಿಂದ 3 ದಶಕಗಳ ಕಾಲ ತಲೆ ಮರೆಸಿಕೊಂಡಿದ್ದ ಪ್ರಕರಣದ ಆರೋಪಿಯನ್ನು ಕೊನೆಗೂ ಬಂಧಿಸಲಾಗಿದೆ.
ಗ್ರಾಮಾಂತರಠಾಣೆಯಲ್ಲಿ ಎಲ್’ಪಿಆರ್ 10/2023 ಕಲಂ 353, 332, 504, 506, ಸಹಿತ 34 ಐಪಿಸಿ ಪ್ರಕರಣದಲ್ಲಿ ಆರೋಪಿ ಯಾಗಿ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಇಮ್ರಾನ್(34) ಎಂಬ ಆರೋಪಿ ಯನ್ನು ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿ ಗ್ರಾಮಾಂತರ ಪೊಲೀಸರು ಈತನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈತನ ವಿರುದ್ಧ ದಸ್ತಗಿರಿ ವಾರೆಂಟ್ ಅನ್ನು ಹೊರಡಿಸಲಾಗಿತ್ತು. ಈತನ ಪತ್ತೆಗಾಗಿ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕ ಚಿದಾನಂದ್ ನೇತೃತ್ವದಲ್ಲಿ ಸಿಬ್ಬಂದಿ ಗಳಾದ ರವಿಕುಮಾರ್ ಮತ್ತು ಕುಮಾರನಾಯ್ಕ ರವರ ತಂಡವನ್ನು ರಚಿಸಲಾಗಿತ್ತು.
ಈ ತಂಡವು ಸತತ ಪ್ರಯತ್ನದ ನಂತರ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.