ಭದ್ರಾವತಿ: ನಗರದ ನ್ಯೂಟೌನ್ ವ್ಯಾಪ್ತಿಯ ಕೂಲಿಬ್ಲಾಕ್ ಶೆಡ್, ಆಂಜನೇಯ ಅಗ್ರಹಾರ ದಲ್ಲಿ ಶ್ರೀ ಮಾರಿಯಮ್ಮ ಅಖಾಡ ಪೊಂಗಲ್ ಕಮಿಟಿ ವತಿಯಿಂದ ಸಂಕ್ರಾಂತಿ ಮತ್ತು ಪೊಂಗಲ್ ಹಬ್ಬದ ಆಚರಣೆ ಹಿನ್ನಲೆ ಯಲ್ಲಿ ಗೂಳಿಗಳ ಓಟದ ಸ್ಪರ್ಧೆ ನಡೆಯಿತು.
ಸಂಕ್ರಾಂತಿ ಮತ್ತು ಪೊಂಗಲ್ ಹಬ್ಬದ ಆಚರಣೆ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಶ್ರೀ ಮಾರಿಯಮ್ಮ ದೇವಿಗೆ ಪೂಜಾ ಕಾರ್ಯಕ್ರಮ ನೆರವೇರಿದವು. ನಂತರ ಪ್ರಸಾದ ವಿನಿಯೋಗ ಮತ್ತು ಮಕ್ಕಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ಹಾಗು ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.
ಬೆಳಿಗ್ಗೆ 11.30 ಕ್ಕೆ ರೋಮಾಂಚನಕಾರಿ ಗೂಳಿಗಳ ಓಟದ ಸ್ಪರ್ಧೆ ನಡೆಯಿತು. ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಎಸ್ ಗಣೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ನಗರಸಭೆ ಸದಸ್ಯರಾದ ಮಣಿ ಎಎನ್‌ಎಸ್, ಕೆ. ಸುದೀಪ್‌ಕುಮಾರ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಮೆಸ್ಕಾಂ ಸಲಹಾ ಸಮಿತಿ ಅಧ್ಯಕ್ಷ ಬಸವಂತಪ್ಪ, ಮುಖಂಡರಾದ ಫ್ರಾನ್ಸಿಸ್, ವಿಲ್ಸನ್‌ಬಾಬು, ಸಮಿತಿ ಪದಾಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಗೂಳಿಗಳ ಓಟದ ಸ್ಪರ್ಧೆ' ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ವಿವಿಧೆಡೆಗಳಿಂದ ಗೂಳಿ ಗಳನ್ನು ಕರೆ ತರಲಾಗುತ್ತಿದೆ. ಸುತ್ತಮುತ್ತಲ ನಿವಾಸಿಗಳು ಸೇರಿದಂತೆ ವಿವಿದೆಡೆಗಳಿಂದ ಸ್ಪರ್ಧೆ ವೀಕ್ಷಿಸಲು ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 9743225795 / 9483159945