ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: SAIL-VISP ನಿಂದ ಸಾಂಸ್ಥಿಕ ಸಾಮಾಜಿಕ ಕಳಕಳಿಯ (CSR) ಅಂಗವಾಗಿ ತಾಲ್ಲೂಕಿನ ದೊಡ್ಡೇರಿ ಗ್ರಾಮದಲ್ಲಿ ಇಂದು ಉಚಿತ ವೈದ್ಯಕೀಯ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು.
ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ ಮತ್ತು ನಗರದ ವಿಐಎಸ್ಎಲ್ ಆಸ್ಪತ್ರೆಗಳ ಸಹಯೋಗ ದೊಂದಿಗೆ ಯಶಸ್ವಿಯಾಗಿ ನೆರವೇರಿತು.
ಶಿಬಿರದಲ್ಲಿ ಸಾಮಾನ್ಯ ತಪಾಸಣೆ, ನೇತ್ರವಿಜ್ಞಾನ, ದಂತವೈದ್ಯಶಾಸ್ತ್ರದಂತಹ ಕ್ಷೇತ್ರಗಳಲ್ಲಿ ತಜ್ಞವೈದ್ಯರು ಭಾಗವಹಿಸುವ ಮೂಲಕ ಆರೋಗ್ಯ ಸಮಾಲೋಚನೆ ಮತ್ತು ರೋಗನಿರ್ಣಯ ಸೇವೆಗಳನ್ನು ನೀಡಲಾಯಿತು.
ಉಪಕ್ರಮದ ಭಾಗವಾಗಿ ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ಕಣ್ಣಿನ ಪರೀಕ್ಷೆ, ದಂತ ತಪಾಸಣೆಗಳನ್ನು ಮಾಡಲಾಯಿತು.
ವಿಐಎಸ್‌ಎಲ್ ಕಾರ್ಖಾನೆಯ ಮುಖ್ಯ ಮಹಾಪ್ರಬಂಧಕ (ಮಾನವಸಂಪನ್ಮೂಲ) ಬಿ. ವಿಶ್ವನಾಥ, ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿಐಎಎಲ್‌ನ ಅಧಿಕಾರಿಗಳಾದ ಡಾ:ಕೆ.ಎಸ್. ಸುಜೀತ್ ಕುಮಾರ್, ಡಾ:ಎಸ್.ಎನ್. ಸುರೇಶ್, ಎಮ್.ಎಲ್. ಯೋಗೀಶ್, ದೊಡ್ಡರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಮಕ್ಕ, ಕಾರ್ಯದರ್ಶಿ ಆರ್. ಮೋಹನ್ ಕುಮಾರ್, ಶಂಕರ ಕಣ್ಣಿನ ಆಸ್ಪತ್ರೆಯ ಡಾ: ಲಕ್ಷಿತ, ಹರ್ಷ ಆರ್.ಗೌಡ ಮತ್ತು ತಂಡದವರು ಉಪಸ್ಥಿತರಿದ್ದರು.
164 ಗ್ರಾಮಸ್ಥರು ಈ ಶಿಬಿರದ ಸದುಪಯೋಗಪಡಿಸಿಕೊಂಡರು.
ವಿಐಎಸ್‌ಎಲ್ ವತಿಯಿಂದ ಉಚಿತ ಔಷಧಿ ಹಾಗೂ ಕನ್ನಡಕಗಳನ್ನು ವಿತರಿಸಲಾಯಿತು.