ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರದ ಖಾಸಿಂ, ಸುಮಾರು 36 ವರ್ಷ ಇವರು 2025 ರ ಡಿ.28 ರಂದು ಗುಜರಿ ವ್ಯಾಪಾರಕ್ಕೆ ಹೋದವರು ಮನೆಗೆ ವಾಪಸ್ ಬಂದಿರುವುದಿಲ್ಲ.
ಕಾಣೆಯಾದ ಖಾಸಿಂ ಸುಮಾರು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಉರ್ದು, ಹಿಂದಿ, ಕನ್ನಡ, ತಮಿಳು ಭಾಷೆ ಮಾತನಾಡುತ್ತಾರೆ. ಎಡ ಕಣ್ಣಿನ ಹುಬ್ಬಿನ ಮೇಲ್ಭಾಗದಲ್ಲಿ ಹಳೆಯ ಗಾಯದ ಗುರುತು ಇದ್ದು, ಮನೆಯಿಂದ ಹೋಗುವಾಗ ಬೂದು ಮತ್ತು ಹಳದಿ ಮಿಶ್ರಿತ ಗೆರೆಗಳುಳ್ಳ ತುಂಬು ತೋಳಿನ ಶರ್ಟ್ ಧರಿಸಿರುತ್ತಾರೆ.
ಈತನ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಹಳೇನಗರ ಪೊಲೀಸ್ ಠಾಣೆ, ಇಲ್ಲಿಗೆ ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಪ್ರಕಟಣೆ ಕೋರಿದೆ.