ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ತಾಲೂಕಿನ ಕ್ಯಾಂಪ್ನ ಭದ್ರಾ ನಾಲೆಯಲ್ಲಿ ಒಂದೇ ಕುಟುಂಬದ ನಾಲ್ವರು ನೀರು ಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ದಂತೆ ನಾಲ್ಕನೇ ದಿನದ ಕಾರ್ಯಾ ಚರಣೆ ವೇಳೆ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದಲ್ಲಿ ನಡೆದ ಕಾರ್ಯಾ ಚರಣೆಯಲ್ಲಿ ನಾಲ್ವರ ಮೃತದೇಹಗಳು ಪತ್ತೆಯಾಗಿವೆ.
ನೀರಿನ ರಭಸದಿಂದಾಗಿ ಶೋಧ ಕಾರ್ಯಚರಣೆಗೆ ಅಡ್ಡಿ ಉಂಟಾಗಿತ್ತು. ಅದರ ನಡುವೆಯೂ ಮೃತದೇಹಗಳನ್ನ ಪತ್ತೆ ಹಚ್ಚುವಲ್ಲಿ ಇಂದು ಯಶಸ್ವಿ ಯಾಗಿದ್ದಾರೆ. ಆ ಮೂಲಕ ಮೃತದೇಹ ಗಳನ್ನು ಹುಡುಕಿ ಕೊಡುತ್ತೇನೆ ಎಂಬ ತಮ್ಮ ಮಾತನ್ನು ಈಶ್ವರ್ ಮಲ್ಪೆ ಉಳಿಸಿಕೊಂಡಿದ್ದಾರೆ. ಸದ್ಯ ಅವರ ಕಾರ್ಯಕ್ಕೆ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಈಶ್ವರ್ ಮಲ್ಪೆ ಮೃತದೇಹ ಶೋಧ ಕಾರ್ಯಾಚರಣೆ ನಡೆಸಿದ್ದರು. ಭದ್ರಾ ನಾಲೆಯಲ್ಲಿ ನೀರು ಹರಿವು ಜಾಸ್ತಿ ಹಿನ್ನೆಲೆ ಕಾರ್ಯಾಚರಣೆಗೆ ಸಾಕಷ್ಟು ತೊಡಕು ಉಂಟಾಗಿತ್ತು. ಈ ಹಿನ್ನಲೆ ಶವ ಶೋಧ ಕಾರ್ಯಾಚರಣೆ ವಿಳಂಬ ವಾಗಿತ್ತು. ಕಳೆದ ಮೂರು ದಿನದಲ್ಲಿ ತಾಯಿ ನೀಲಾಬಾಯಿ ಮತ್ತು ರವಿ ಶವ ಪತ್ತೆ ಆಗಿತ್ತು. ನಾಲ್ಕನೇ ದಿನವಾದ ಇಂದು ಕಾರ್ಯಾಚರಣೆ ವೇಳೆ ಮಗಳು ಶ್ವೇತಾ ಮತ್ತು ಅಳಿಯ ಪರಶುರಾಮ ಮೃತದೇಹಗಳು ಪತ್ತೆ ಆಗಿವೆ.
ಕಾರ್ಯಾಚರಣೆ ಬಳಿಕ ಮಾತನಾಡಿದ ಈಶ್ವರ್ ಮಲ್ಪೆ, ನಾನು ಮೊದಲ ದಿನವೇ ಮಾತು ಕೊಟ್ಟಿದ್ದೆ. ನಾಲ್ಕು ಶವ ಪತ್ತೆ ಮಾಡಿ ಇಲ್ಲಿಂದ ಹೋಗುತ್ತೇನೆ ಅಂತ. ಅದೇ ರೀತಿ ಮತ್ತೆ ಎರಡು ಶವ ಪತ್ತೆ ಮಾಡಿದೆ. ಈಗ ನಾಲ್ಕು ಶವ ಪತ್ತೆ ಮಾಡಿರುವ ಸಮಾಧಾನ ನನಗಿದೆ. ಆದರೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಶ್ವೇತಾ ಮತ್ತು ಪರಶುರಾಮ ತಂದೆ-ತಾಯಿ ಮೃತಪಟ್ಟಿದ್ದಾರೆ. ಅವರ ಮಕ್ಕಳು ತಂದೆ-ತಾಯಿ ಇಲ್ಲದೇ ತಬ್ಬಲಿ ಆಗಿದ್ದಾರೆ. ನಿಜಕ್ಕೂ ಈ ದುರ್ಘಟನೆ ಯಿಂದ ನನಗೆ ಬೇಸರ ಆಗಿದೆ. ಕಾರ್ಯಾಚರಣೆಗೆ ಗ್ರಾಮಸ್ಥರು, ಪೋಲೀಸರು ಮತ್ತು ಎಸ್ಡಿಆರ್ಎಫ್ ತಂಡ ಸಹಾಯ ಮಾಡಿದೆ ಎಂದು ಹೇಳಿದ್ದಾರೆ.