ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಮಹಿಳೆಯೋರ್ವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದಂತೆ, ಒಂದೇ ಕುಟುಂಬದ ಐವರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ 4 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ತಾಲೂಕಿನ ಸಂಕ್ಲಿಪುರ ಗ್ರಾಮದ ನಿವಾಸಿ ಮೋಹನ್ ಆರ್ (33), ಇವರ ತಾಯಿ ಸರೋಜಮ್ಮ (60), ತಂದೆ ರಂಗಪ್ಪ (66), ಸಹೋದರ ಶೇಖರ್ (44) ಹಾಗೂ ಮೂರ್ತಿ (41) ಜೈಲು ಶಿಕ್ಷೆಗೆ ಗುರಿಯಾದವರೆಂದು ಗುರುತಿಸಲಾಗಿದೆ.
ಜೈಲು ಶಿಕ್ಷೆಯ ಜೊತೆಗೆ ಅಪರಾಧಿಗಳಿಗೆ 1.50 ಲಕ್ಷ ರೂ. ದಂಡವನ್ನು ನ್ಯಾಯಾಲಯ ವಿಧಿಸಿದ್ದು, ಮೃತ ಮಹಿಳೆಯ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.
ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ರಾದ ರತ್ನಮ್ಮ ಪಿ ಅವರು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ :
ಪ್ರೇಮಾ ಎಂಬ ಮಹಿಳೆ ಮೃತರಾದವ ರಾಗಿದ್ದು, ಪ್ರೇಮಾ ಅವರಿಗೆ ಪತಿ ಹಾಗೂ ಅವರ ಮನೆಯವರು ದೈಹಿಕ – ಮಾನಸಿಕ ಕಿರುಕುಳ ನೀಡುತ್ತಿದ್ದರು. ಹಾಗೆಯೇ ತವರು ಮನೆಗೆ ವಾಪಾಸ್ ಕಳುಹಿಸಿದ್ದರು.
ಇದರಿಂದ ಬೇಸರಗೊಂಡ ಪ್ರೇಮಾ 26-03-2017 ರಂದು ವಿಷ ಸೇವನೆ ಮಾಡಿದ್ದು, 07/04/2017 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.